ವಿರಾಟ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಹಶೀಂ ಆಮ್ಲಾ, ಯಾವುದು ಆ ದಾಖಲೆ!

ಅತ್ತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಗಳನ್ನು ಒಂದೊಂದಾಗಿ ಮುರಿಯುತ್ತಿದ್ದರೆ, ಇತ್ತ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸಮನ್ ಹಶೀಂ ಆಮ್ಲಾ ವಿರಾಟ್ ಕೊಹ್ಲಿ ದಾಖಲೆಗಳನ್ನು ಒಂದೊಂದಾಗಿ ಮುರಿಯುತ್ತಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಪೋರ್ಟ್ ಎಲಿಜಬೆತ್: ಅತ್ತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಗಳನ್ನು ಒಂದೊಂದಾಗಿ ಮುರಿಯುತ್ತಿದ್ದರೆ, ಇತ್ತ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸಮನ್ ಹಶೀಂ ಆಮ್ಲಾ ವಿರಾಟ್ ಕೊಹ್ಲಿ ದಾಖಲೆಗಳನ್ನು ಒಂದೊಂದಾಗಿ ಮುರಿಯುತ್ತಿದ್ದಾರೆ.
ಹೌದು.. ಹಶೀಮ್ ಆಮ್ಲಾ ಇದೀಗ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ಮುರಿದಿದ್ದು, ತವರಿನಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಕೊಹ್ಲಿಯ ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ. ಪಾಕಿಸ್ತಾನದ ವಿರುದ್ಧದ ಮೊದಲ ಪಂದ್ಯದಲ್ಲಿ 120 ಎಸೆತಗಳಲ್ಲಿ ಅಜೇಯ 108 ರನ್ ಗಳಿಸಿದ ಆಮ್ಲಾ, ತಮ್ಮ ವೃತ್ತಿ ಜೀವನದ 27ನೇ ಏಕದಿನ ಶತಕ ಸಿಡಿಸಿದರು. ಆ ಮೂಲಕ ಅತ್ಯಂತ ಕಡಿಮೆ ಇನ್ನಿಂಗ್ಸ್ ನಲ್ಲಿ 27 ಶತಕ ಸಿಡಿಸಿದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಲ್ಲದೇ, ವಿರಾಟ್ ಕೊಹ್ಲಿ ಅವರ ಹೆಸರಲ್ಲಿದ್ದ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಕೊಹ್ಲಿ ಏಕದಿನ ಕ್ರಿಕೆಟ್ 27 ಶತಕಗಳಿಗಾಗಿ ಒಟ್ಟು 169 ಇನ್ನಿಂಗ್ಸ್ ತೆಗೆದುಕೊಂಡಿದ್ದರು. ಈ ಹಿಂದೆ ಇದು ದಾಖಲೆಯಾಗಿತ್ತು. ಇದೀಗ ಹಶೀಮ್ ಅಮ್ಲಾ 167 ಇನ್ನಿಂಗ್ಸ್ ಗಳಲ್ಲಿ 27 ಶತಕ ಸಿಡಿಸಿ, ಈ ದಾಖಲೆಯನ್ನು ಮುರಿದಿದ್ದಾರೆ.
ಇನ್ನು ಪಟ್ಟಿಯಲ್ಲಿ ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮೂರನೇ ಸ್ಥಾನದಲ್ಲಿದ್ದು, 254 ಇನ್ನಿಂಗ್ಸ್ ಗಳಲ್ಲಿ ಸಚಿನ್ 27 ಶತಕ ಸಿಡಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಆಸಿಸ್ ಮಾಜಿ ನಾಯಕ ರಿಕ್ಕಿ ಪಾಟಿಂಗ್ ಇದ್ದು, ಪಾಟಿಂಗ್ 308 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಶ್ರೀಲಂಕಾದ ಮಾಜಿ ಆಟಗಾರ ಸನತ್ ಜಯಸೂರ್ಯ 404 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಆಮ್ಲಾ ಶತಕದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 266 ರನ್ ಗಳಿಸಿ ಪಾಕ್ ಗೆ ಗೆಲ್ಲಲು 267 ರನ್ ಗಳ ಸವಾಲಿನ ಗುರಿ ನೀಡಿತು. ಈ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ ಇಮಾಮ್ ಉಲ್ ಹಕ್ (86 ರನ್), ಬಾಬರ್ ಆಜಾಂ (49 ರನ್), ಮಹಮದ್ ಹಫೀಜ್ (ಅಜೇಯ 71 ರನ್) ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದಾಗಿ ಪಾಕ್ ತಂಡ ಐದು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಆ ಮೂಲಕ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com