'ನಮ್ಮ ಮುಂದೆ ನಿಮ್ಮ ಆಟ ನಡೆಯಲ್ಲಾ' ಅಂದಿದ್ದ ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಜಯ!

Published On :
ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ನ್ಯೂಜಿಲ್ಯಾಂಡ್ ಮಾಜಿ ಕ್ರಿಕೆಟಿಗರು ಆಸ್ಟ್ರೇಲಿಯಾ ವಿರುದ್ಧ ಗೆದ್ದರೆ ಸಾಲದು. ಮುಂದಿದೆ ಮಾರಿಹಬ್ಬ ಎಂದು ಹೇಳಿದ್ದು ಇದಕ್ಕೆ ಪ್ರತ್ಯುತ್ತರ ನೀಡಿರುವ ಕೊಹ್ಲಿ ಪಡೆ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ.
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಕಿವೀಸ್ ಮಾಜಿ ಆಟಗಾರ ಸ್ಕಾಟ್ ಸ್ಟೈರಿಸ್ ತಿರುಗೇಟು ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಬರೀ ಆರಂಭ ಅಷ್ಟೇ. ಮುಂದಿದೆ ಮಾರಿಹಬ್ಬ ಎಂದು ಸ್ಕಾಟ್ ಟ್ವೀಟ್ ಮಾಡಿ ಸವಾಲೆಸೆದಿದ್ದರು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲ್ಯಾಂಡ್ ತಂಡ 157 ರನ್ ಗಳಿಗೆ ಸರ್ವಪತನ ಕಂಡಿತ್ತು. ಇನ್ನು 158 ರನ್ ಗಳ ಅಲ್ಪಮೊತ್ತದ ಗುರಿಯನ್ನು ಬೆನ್ನಟ್ಟಿದ್ದ ಟೀಂ ಇಂಡಿಯಾಗೆ ಆರಂಭಿಕ ಆಟಗಾರ ಶಿಖರ್ ಧವನ್ ಅರ್ಧ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇನ್ನು ಪ್ರತಿಕೂಲ ವಾತಾವರಣ ಹಿನ್ನೆಲೆಯಲ್ಲಿ ಪಂದ್ಯವನ್ನು 20 ನಿಮಿಷಗಳ ಕಾಲ ನಿಲ್ಲಿಸಲಾಗಿತ್ತು. ಇದರಿಂದಾಗಿ ಡಕ್ ವರ್ಥ್ ಲೂಯಿಸ್ ನಿಯಮದಂತೆ ಟೀಂ ಇಂಡಿಯಾಗೆ 156 ರನ್ ಗಳ ಗುರಿ ನೀಡಲಾಗಿತ್ತು.
ಭಾರತ ಪರ ರೋಹಿತ್ ಶರ್ಮಾ 11, ಶಿಖರ್ ಧವನ್ ಅಜೇಯ 75, ವಿರಾಟ್ ಕೊಹ್ಲಿ 45 ಹಾಗೂ ಅಂಬಟ್ಟಿ ರಾಯುಡು ಅಜೇಯ 13 ರನ್ ಗಳಿಸಿದ್ದಾರೆ.
ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಫೆರ್ಗೂಸನ್ ಹಾಗೂ ಬ್ರಾಸ್ವೆಲ್ ತಲಾ 1 ವಿಕೆಟ್ ಪಡೆದಿದ್ದಾರೆ.
ನ್ಯೂಜಿಲ್ಯಾಂಡ್ ಪರ ಬ್ಯಾಟಿಂಗ್ ನಲ್ಲಿ ಕೇನ್ ವಿಲಿಯಮ್ಸನ್ 64, ರಾಸ್ ಟೇಲರ್ 24, ಸಂಟ್ನೇರ್ 14 ರನ್ ಗಳಿಸಿದ್ದಾರೆ.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಕುಲದೀಪ್ ಯಾದವ್ 4, ಮೊಹಮ್ಮದ್ ಶಮಿ 3, ಚಹಾಲ್ 2 ಹಾಗೂ ಕೇದಾರ್ ಜಾದವ್ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaNew Zealandನ್ಯೂಜಿಲ್ಯಾಂಡ್Cricket Offbeatಕ್ರಿಕೆಟ್ ಸ್ವಾರಸ್ಯScott Styrisಸ್ಕಾಟ್ ಸ್ಟೈರಿಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


