ಕೊಹ್ಲಿಗೆ ವಿಶ್ರಾಂತಿ: ನ್ಯೂಜಿಲ್ಯಾಂಡ್ ವಿರುದ್ಧ ಉಳಿದ ಏಕದಿನ, ಟಿ20 ಪಂದ್ಯಗಳಿಗೆ ರೋಹಿತ್ ಶರ್ಮಾ ನಾಯಕ

ನ್ಯೂಜಿಲ್ಯಾಂಡ್ ವಿರುದ್ಧದ ಕೊನೆಯ ಎರಡು ಏಕದಿನ ಹಾಗೂ ಟಿ-20 ಪಂದ್ಯಗಳಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಇಂದು ತಿಳಿಸಿದೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on

ನವದೆಹಲಿ: ನ್ಯೂಜಿಲ್ಯಾಂಡ್ ವಿರುದ್ಧದ ಕೊನೆಯ ಎರಡು ಏಕದಿನ ಹಾಗೂ ಟಿ-20 ಪಂದ್ಯಗಳಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ  ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಇಂದು ತಿಳಿಸಿದೆ.

ನೆಪಿಯರ್ ನಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಭಾರತ ತಂಡ 8 ವಿಕೆಟ್ ಗಳಿಂದ ಜಯಗಳಿಸಿದ ಕೆಲ ತಾಸುಗಳ ಬಳಿಕ ಈ ಘೋಷಣೆ ಮಾಡಲಾಗಿದೆ.

ಕಳೆದ ಕೆಲವು ತಿಂಗಳುಗಳಿಂದ  ಕೊಹ್ಲಿಗೆ ಕೆಲಸ ಹೆಚ್ಚಿರುವುದನ್ನು ಮನಗಂಡಿರುವ ತಂಡ ನಿರ್ವಹಣೆ ಹಾಗೂ ಹಿರಿಯ ಆಯ್ಕೆದಾರರು ಸಮಿತಿ ಸ್ವದೇಶದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿ ಹಿನ್ನೆಲೆಯಲ್ಲಿ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

ಕೊಹ್ಲಿ ಅನುಪಸ್ಥಿತಿಯಲ್ಲಿ ರೊಹಿತ್ ಶರ್ಮಾ ಹ್ಯಾಮಿಲ್ಟನ್ ಹಾಗೂ ವೆಲ್ಲಿಂಗ್ಟನ್ ನಲ್ಲಿ ನಡೆಯಲಿರುವ ನಾಲ್ಕು ಹಾಗೂ 5ನೇ ಏಕದಿನ ಪಂದ್ಯಗಳನ್ನು ಮುನ್ನಡೆಸಲಿದ್ದಾರೆ. ಕ್ರಮವಾಗಿ ಜನವರಿ 31 ಹಾಗೂ ಫೆಬ್ರವರಿ 3 ರಂದು ಈ ಎರಡು ಪಂದ್ಯಗಳು ನಡೆಯಲಿವೆ. ಫೆಬ್ರವರಿ 6 ರಿಂದ ನಡೆಯಲಿರುವ ಮೂರು ಟಿ-20 ಪಂದ್ಯಗಳಿಂದಲೂ ಕೊಹ್ಲಿ ಹೊರಗೆ ಉಳಿಯಲಿದ್ದಾರೆ.

 ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಲ್ಲಿ ಕೊಹ್ಲಿ ಬದಲಿಗೆ ಯಾರನ್ನೂ ತೆಗೆದುಕೊಂಡಿಲ್ಲ. ಕೊನೆಯ ಎರಡು ಹಾಗೂ ಟಿ-20 ಪಂದ್ಯಗಳನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ ಎಂದು  ಹೇಳಿಕೆಯಲ್ಲಿ ತಿಳಿಸಲಾಗಿದೆ.

 ಕೊಹ್ಲಿ ಬದಲಿ ಆಟಗಾರರನ್ನು ಬಿಸಿಸಿಐ ಘೋಷಿಸಿದ್ದರೂ ಕಳೆದ ವರ್ಷ ನಡೆದ 19 ವರ್ಷದೊಳಗಿನ ವಿಶ್ವ ಕಪ್ ಕ್ರಿಕೆಟ್ ನಲ್ಲಿ ನಂಬರ್ 3ರ ಬ್ಯಾಟ್ಸ್ ಮನ್ ಆಗಿ ಗಮನ ಸೆಳೆದಿದ್ದ ಸುಬ್ ಮನ್ ಗಿಲ್   ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಸಾಧ್ಯತೆ ಇದೆ.  ಇವರು ಟೂರ್ನಿಯ ಆರು ಪಂದ್ಯಗಳಿಂದ 102 ಸರಾಸರಿಯಲ್ಲಿ 372 ರನ್ ಗಳಿಸುವ ಮೂಲಕ ಸರಣಿ ಶ್ರೇಷ್ಟ ಪ್ರಶಸ್ತಿಗೆ ಪಾತ್ರರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com