100 ವಿಕೆಟ್ ಪಡೆದ ಮೊಹಮ್ಮದ್ ಶಮಿ, ಹಾಡಿ ಹೊಗಳಿದ ವಿರಾಟ್ ಕೊಹ್ಲಿ!

ನೇಪಿಯರ್: ಏಕದಿನ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ 100 ವಿಕೆಟ್ ಪಡೆದ ಭಾರತೀಯ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿರುವ ವೇಗಿ ಮೊಹಮ್ಮದ್ ಶಮಿಯನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಶಂಸಿದ್ದಾರೆ.
ಗಾಯಗೊಂಡಿದ್ದರೂ ಮೊಹಮ್ಮದ್ ಶಮಿ ಉತ್ತಮ ಪ್ರದರ್ಶನ ತೋರುವ ಮೂಲಕ ದೈಹಿಕವಾಗಿ ಸದೃಢರಾಗಿರುವುದಾಗಿ ತಿಳಿಸಿದ್ದಾರೆ ಎಂದು ಕೊಹ್ಲಿ ಹೇಳಿದ್ದಾರೆ.
ಕಳೆದ ವರ್ಷ ದೈಹಿಕ ಸದೃಢತೆ ಹಾಗೂ ಕೆಲ ವೈಯಕ್ತಿಕ ಸಮಸ್ಯೆಗಳಿಂದ ಸುದ್ದಿಯಾಗಿದ್ದ ಮೊಹಮ್ಮದ್ ಶಮಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 19 ರನ್ ಗಳಿಗೆ 3 ವಿಕೆಟ್ ಪಡೆಯುವ ಮೂಲಕ ಮ್ಯಾನ್ ಆಪ್ ದಿ ಮ್ಯಾಚ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಎಲ್ಲ ತೊಂದರೆಗಳನ್ನು ಎದುರಿಸಿ ಮೊಹಮ್ಮದ್ ಶಮಿ 56 ನೇ ಪಂದ್ಯದಲ್ಲಿ 100 ವಿಕೆಟ್ ಪಡೆದ ಗೌರವಕ್ಕೆ ಪಾತ್ರರಾಗಿದ್ದಾರೆ.
ಇಂದು ನಡೆದ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನ ಆರಂಭಿಕ ಆಟಗಾರರಾದ ಮಾರ್ಟಿನ್ ಗುಪ್ಟಿಲ್, ಕೊಲಿನ್ ಮುನ್ರೊ ಅವರನ್ನು ಮೊಹಮ್ಮದ್ ಶಮಿ ಔಟ್ ಮಾಡಿದ್ದರು.
ಪಂದ್ಯದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಬೌಲಿಂಗ್ ಬಗ್ಗೆ ಹಾಡಿ ಹೊಗಳಿದರು. ಶಮಿ ಸ್ವಂತ ಸಾಮರ್ಥ್ಯ ಹಾಗೂ ಸದೃಢತೆ ಬಗ್ಗೆ ನಂಬಿಕೆ ಇತ್ತು. ಇದನ್ನು ಅವರ ವೃತ್ತಿ ಜೀವನದಲ್ಲಿ ನಾನು ನೋಡಿದ್ದೇನೆ. ಟೆಸ್ಟ್ ಮಾದರಿಯಲ್ಲೂ ಏಕದಿನ ಕ್ರಿಕೆಟ್ ರೀತಿಯಲ್ಲಿ ಬೌಲಿಂಗ್ ಮಾಡುತ್ತಾರೆ ಎಂದು ಹೇಳಿದರು.
ಕಳೆದ ಕೆಲವು ಪಂದ್ಯಗಳಲ್ಲಿ ಟೀಂ ಇಂಡಿಯಾ ಸಮತೋಲಿತ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಟಾಸ್ ಗೆದ್ದಾಗ 300 ರನ್ ಗಳಿಸಬಹುದು ಅಂದುಕೊಂಡಿದ್ದೆ. ಆದರೆ, 150 ರ ಆಸುಬಾಸಿನಲ್ಲಿ ವಿಕೆಟ್ ಪಡೆದ ಭಾರತೀಯ ಬೌಲಿಂಗ್ ಸೂಪರ್ ಎಂದರು.
ಇಂದಿನ ಪಂದ್ಯದಲ್ಲಿ ಕುಲದೀಪ್ ಯಾದವ್ 10 ಓವರ್ ಗಳಲ್ಲಿ 39 ರನ್ ಗಳಿಗೆ 4 ವಿಕೆಟ್ ಪಡೆದುಕೊಂಡರೆ, ಯುಜುವೇಂದ್ರ ಚಾಹೆಲ್ ಹಾಗೂ ಕೇದಾರ್ ಜಾದವ್ ತಲಾ ಮೂರು ವಿಕೆಟ್ ಪಡೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


