ಗಂಭೀರ್ ಆಯ್ಕೆಯ ವಿಶ್ವಕಪ್ ತಂಡದಲ್ಲಿ ಎಂಎಸ್ ಧೋನಿಗೆ ಸಿಕ್ತ ಛಾನ್ಸ್?, ಇಲ್ಲಿದೆ ಪಟ್ಟಿ!

ಬಲಿಷ್ಠ ತಂಡವಾಗಿ ಹೊರಹೊಮ್ಮಿರುವ ಟೀಂ ಇಂಡಿಯಾ ಮುಂಬರುವ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದ್ದು ಇದೀಗ ತಂಡದ ಆಯ್ಕೆ ಕುರಿತಂತೆ ಹಿರಿಯ...
ಗೌತಮ್ ಗಂಭೀರ್
ಗೌತಮ್ ಗಂಭೀರ್
Updated on: 
ನವದೆಹಲಿ: ಬಲಿಷ್ಠ ತಂಡವಾಗಿ ಹೊರಹೊಮ್ಮಿರುವ ಟೀಂ ಇಂಡಿಯಾ ಮುಂಬರುವ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದ್ದು ಇದೀಗ ತಂಡದ ಆಯ್ಕೆ ಕುರಿತಂತೆ ಹಿರಿಯ ಆಟಗಾರರು ವಿಶ್ವಕಪ್ ತಂಡದಲ್ಲಿ ಯಾರೆಲ್ಲಾ ಆಡಿದರೆ ಸೂಕ್ತ ಎಂಬ ಪಟ್ಟಿಯೊಂದನ್ನು ರೆಡಿ ಮಾಡಿ ಬಿಡುತ್ತಿದ್ದಾರೆ. 
ಈ ಹಿಂದೆ ಟೀಂ ಇಂಡಿಯಾದ ಮಾಜಿ ಕೋಚ್ ಅನಿಲ್ ಕುಂಬ್ಳೆ ಅವರು ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದರು. ಇದೀಗ ಗೌತಮ್ ಗಂಭೀರ್ ಸಹ ಆಟಗಾರರ ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದಾರೆ. ಇನ್ನು ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಗೌತಮ್ ಗಂಭೀರ್ ನಡುವಿನ ಸಂಬಂಧ ಅಷ್ಟಾಗಿ ಚೆನ್ನಾಗಿರದಿದ್ದರಿಂದ. ಅಲ್ಲದೆ ಕಳೆದ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಅವಕಾಶ ಸಿಗದ ಬೇಸರದಲ್ಲಿರುವ ಗೌತಮ್ ತಮ್ಮ ಪಟ್ಟಿಯಲ್ಲಿ ಧೋನಿ ಛಾನ್ಸ್ ನೀಡಿದ್ದಾರೆಯೇ ಎಂಬ ಪ್ರಶ್ನೆ ಮೂಡಿಸಿದೆ. 
ಗಂಭೀರ್ ಪ್ರಕಟಗೊಳಿಸಿರುವ 15 ಸದಸ್ಯರನ್ನೊಳಗೊಂಡ ತಂಡದಲ್ಲಿ ಕೆಲವೊಂದು ಅಚ್ಚರಿಯ ಮುಖಗಳಿಗೆ ಸ್ಥಾನ ನೀಡಿದ್ದಾರೆ. ಆರ್ ಅಶ್ವಿನ್ ಗೆ ತಂಡದಲ್ಲಿ ಸ್ಥಾನ ನೀಡಿದ್ದರೆ ಆಲ್ ರೌಂಡರ್ ರವೀಂದ್ರ ಜಡೇಜಾ ಹಾಗೂ ಉದಯೋನ್ಮುಖ ವಿಕೆಟ್ ಕೀಪರ್ ರಿಷಬ್ ಪಂತ್ ರನ್ನು ತಂಡದಲ್ಲಿ ಹೊರಹಾಕಿದ್ದಾರೆ. 
ಗಂಭೀರ್ ಪ್ರಕಟಿಸಿರುವ ಆಟಗಾರರ ಪಟ್ಟಿ ಇಂತಿದೆ 
ಶಿಖರ್ ಧವನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ(ನಾಯಕ), ಎಂಎಸ್ ಧೋನಿ, ಕೇದಾರ್ ಜಾಧವ್, ಅಂಬಾಟಿ ರಾಯುಡು, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಆರ್ ಅಶ್ವಿನ್, ಯಜುವೇಂದ್ರ ಚಹಾಲ್ ಹಾಗೂ ಕುಲದೀಪ್ ಯಾದವ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com