2ನೇ ಏಕದಿನ ಪಂದ್ಯ: ದಶಕಗಳಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ದಾಖಲೆಯ ಜಯ!

ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ದಶಕದಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ನೆಲದಲ್ಲಿ ಭಾರತ ಗಳಿಸಿದ ದಾಖಲೆಯ ಜಯ ಇದಾಗಿದೆ.
ದಶಕಗಳಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ದಾಖಲೆಯ ಜಯ!
ದಶಕಗಳಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ದಾಖಲೆಯ ಜಯ!
ನೇಪಿಯರ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ದಶಕದಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲ್ಯಾಂಡ್ ನೆಲದಲ್ಲಿ ಭಾರತ ಗಳಿಸಿದ ದಾಖಲೆಯ ಜಯ ಇದಾಗಿದೆ. 
ನೇಪಿಯರ್ ನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 325 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ಕೇವಲ 234 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೊಹ್ಲಿ ಪಡೆ ಎದುರು 90 ರನ್ ಗಳ ಅಂತರದಲ್ಲಿ ಮಂಡಿಯೂರಿತು. ಈ ಮೂಲಕ ಭಾರತ ಐತಿಹಾಸಿಕ ಜಯ ಗಳಿಸಿದ್ದು, 2009 ರಲ್ಲಿ ಹ್ಯಾಮಿಲ್ಟನ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಗಳಿಸಿದ ಜಯದ ದಾಖಲೆಯನ್ನು ತಾನೇ ಸರಿಗಟ್ಟಿದೆ. 
2009 ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 84 ರನ್ ಗಳ ಅಂತರದಿಂದ ಗೆಲುವು ಸಾಧಿಸಿತ್ತು (ಡಕ್ವರ್ತ್ ಲೂಯೀಸ್ ನಿಯಮ) ಈ ವರೆಗೂ ಭಾರತ ನ್ಯೂಜಿಲ್ಯಾಂಡ್ ವಿರುದ್ಧ ಗರಿಷ್ಠ ರನ್ ಗಳಿಂದ  ಗೆದ್ದ ದಾಖಲೆ ಇದಾಗಿತ್ತು. 2009 ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಗೆಲುವಿನಲ್ಲಿ ವಿರೇಂದ್ರ ಸೆಹ್ವಾಗ್ ಶತಕ ಮಹತ್ವದ ಪಾತ್ರ ವಹಿಸಿತ್ತು. 90 ರನ್ ಗಳ ಅಂತರದಿಂದ ಗೆಲ್ಲುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com