2ನೇ ಏಕದಿನ ಪಂದ್ಯ: ಕಿವೀಸ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಭರ್ಜರಿ ಆರಂಭ

ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ತಂಡದ ಓಪನರ್ ಗಳಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಭರ್ಜರಿ ಆರಂಭ ಒದಗಿಸಿದ್ದಾರೆ.
ಟಾಸ್ ಗೆದ್ದ ಭಾರತ
ಟಾಸ್ ಗೆದ್ದ ಭಾರತ
Updated on: 
ಮೌಂಟ್​​​ ಮೌಂಗನ್ಯುಯಿ: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ತಂಡದ ಓಪನರ್ ಗಳಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಭರ್ಜರಿ ಆರಂಭ ಒದಗಿಸಿದ್ದಾರೆ.
ಈ ಹಿಂದೆ ನೇಪಿಯನರ್ ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲೇ ಭರ್ಜರಿ ಗೆಲುವು ಕಂಡಿರುವ ಟೀಂ ಇಂಡಿಯಾ ಇಂದು ಎರಡನೇ ಪಂದ್ಯ ಆಡುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಕೊಹ್ಲಿ ಪಡೆ ಉತ್ತಮ ಆಟ ಪ್ರದರ್ಶಿಸುತ್ತಿದೆ.
ರೋಹಿತ್ ಮತ್ತು ಶಿಖರ್ ಧವನ್ ನಾಯಕ ವಿರಾಟ್ ಕೊಹ್ಲಿ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟಿಂಗ್ ಮಾಡುತ್ತಿದ್ದು, ಮೊದಲ 8 ಓವರ್ ಗಳ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 41 ರನ್ ಗಳಿಸಿದೆ. ತಲಾ 20 ರನ್ ಗಳಿಸಿರುವ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಬ್ಯಾಟಿಂಗ್ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com