ರೋಹಿತ್ ಪಡಿಲ್
ಕ್ರಿಕೆಟ್
ಸಚಿನ್, ಅಫ್ರಿದಿ ದಾಖಲೆ ಮುರಿದ ನೇಪಾಳದ ರೋಹಿತ್, ಅರ್ಧ ಶತಕ ಬಾರಿಸಿದ ವಿಶ್ವದ ಕಿರಿಯ ಆಟಗಾರ
ಕ್ರಿಕೆಟ್ ದೇವರು ಎಂದೇ ಖ್ಯಾತಿ ಪಡೆದಿರುವ ಸಚಿನ್ ತೆಂಡೂಲ್ಕರ್ ಹಾಗೂ ಪಾಕಿಸ್ತಾನ ಶಾಹಿದ್ ಅಫ್ರಿದಿ ಅವರ ದಾಖಲೆ ಮುರಿದ ನೇಪಾಳದ 16 ವರ್ಷದ ಯುವ...
ದುಬೈ: ಕ್ರಿಕೆಟ್ ದೇವರು ಎಂದೇ ಖ್ಯಾತಿ ಪಡೆದಿರುವ ಸಚಿನ್ ತೆಂಡೂಲ್ಕರ್ ಹಾಗೂ ಪಾಕಿಸ್ತಾನ ಶಾಹಿದ್ ಅಫ್ರಿದಿ ಅವರ ದಾಖಲೆ ಮುರಿದ ನೇಪಾಳದ 16 ವರ್ಷದ ಯುವ ಆಟಗಾರ ರೋಹಿತ್ ಪಡಿಲ್, ಶನಿವಾರ ಯುಎಇ ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಅರ್ಧಶತಕ ಬಾರಿಸಿದ ವಿಶ್ವದ ಅತ್ಯಂತ ಕಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಇಂದು ಯುಎಇ ವಿರುದ್ದ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದ ರೋಹಿತ್ 55 ರನ್ ಗಳಿಸಿ ತಂಡಕ್ಕೆ ನೆರವಾದರು.
ಈ ಅರ್ಧಶತಕದ ಮೂಲಕ ರೋಹಿತ್ ಭಾರತದ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ಪಾಕಿಸ್ತಾನದ ಶಾಹಿದ್ ಅಫ್ರಿದಿಯವರನ್ನು ಹಿಂದಿಕ್ಕಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಹಿಂದೆ ಸಚಿನ್ ಮೊದಲ ಅರ್ಧಶತಕ(ಟೆಸ್ಟ್ ಕ್ರಿಕೆಟ್) ಸಿಡಿಸಿದಾಗ ಅವರ ವಯಸ್ಸು 16 ವರ್ಷ ಹಾಗೂ 213 ದಿನಗಳಾಗಿತ್ತು. ಇನ್ನು ಅಫ್ರಿದಿ( ಏಕದಿನ ಕ್ರಿಕೆಟ್) 16 ವರ್ಷ 217 ದಿನಗಳಲ್ಲಿ ಈ ಸಾಧನೆ ಮಾಡಿದ್ದರು. ರೋಹಿತ್ ಪಡೀಲ್ 16 ವರ್ಷ 146 ದಿನಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ.
ಇದಕ್ಕೂ ಮೊದಲು 15 ವರ್ಷ 335 ದಿನಗಳು ಆಗಿರುವಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕಾಲಿಟ್ಟ 4 ನೇ ಕಿರಿಯ ಆಟಗಾರ ಎಂಬ ದಾಖಲೆಗೂ ರೋಹಿತ್ ಪಾತ್ರರಾಗಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ