3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಕಿವೀಸ್ ಬ್ಯಾಟಿಂಗ್ ಆಯ್ಕೆ

ಬೇ ಓವಲ್ ನಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡದ ವಿರುದ್ಧ ಆತಿಥೇಯ ತಂಡ ನ್ಯೂಜಿಲೆಂಡ್ ಟಾಸ್ ಗೆದ್ದಿದ್ದು, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಟಾಸ್ ಗೆದ್ದ ಕಿವೀಸ್ ಬ್ಯಾಟಿಂಗ್ ಆಯ್ಕೆ
ಟಾಸ್ ಗೆದ್ದ ಕಿವೀಸ್ ಬ್ಯಾಟಿಂಗ್ ಆಯ್ಕೆ
Updated on: 
ಬೇ ಓವಲ್: ಬೇ ಓವಲ್ ನಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡದ ವಿರುದ್ಧ ಆತಿಥೇಯ ತಂಡ ನ್ಯೂಜಿಲೆಂಡ್ ಟಾಸ್ ಗೆದ್ದಿದ್ದು, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಐದು ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಮೊದಲೆರಡು ಪಂದ್ಯಗಳಲ್ಲಿ ಸೋತಿರುವ ಕೇನ್ ವಿಲಿಯಮ್ಸನ್ ಪಡೆಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸರಣಿ ಜೀವಂತವಾಗಿರಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಇನ್ನು ಈಗಾಗಲೇ 2 ಪಂದ್ಯ ಗೆದ್ದಿರುವ ಭಾರತ ತಂಡಕ್ಕೆ ಈ ಪಂದ್ಯದ ಗೆಲುವಿನ ಮೂಲಕ ಸರಣಿ ಕೈ ವಶ ಮಾಡಿಕೊಳ್ಳುವ ತವಕದಲ್ಲಿದೆ.
ಕಿವೀಸ್ ಗೆ ಆರಂಭಿಕ ಆಘಾತ
ಇನ್ನು ಟಾಸ್ ಗೆದ್ದು ಬ್ಯಾಟಿಂಗ್ ಮಾಡುತ್ತಿರುವ ನ್ಯೂಜಿಲೆಂಡ್ ತಂಡಕ್ಕೆ ಭಾರತೀಯ ವೇಗಿಗಳು ಆರಂಭಿಕ ಆಘಾತ ನೀಡಿದ್ದು, ಕೇವಲ 26 ರನ್ ಗಳಿಗೆ ಆರಂಭಿಕರಾದ ಮಾರ್ಟಿನ್ ಗಪ್ಟಿಲ್ (13 ರನ್) ಮತ್ತು ಕೊಲಿನ್ ಮನ್ರೋ (7 ರನ್) ಔಟ್ ಆಗಿದ್ದಾರೆ. ಭಾರತಕ್ಕೆ ವೇಗಿಗಳಾದ ಭುವನೇಶ್ವರ್ ಕುಮಾರ್ ಹಾಗೂ ಮಹಮದ್ ಶಮಿ ಉತ್ತಮ ಆರಂಭ ಒದಗಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com