ವಿರಾಟ್ ಕೊಹ್ಲಿಯಿಂದ ಮತ್ತೊಂದು ಅಪರೂಪದ ದಾಖಲೆ; ಸಚಿನ್, ದ್ರಾವಿಡ್, ಗಂಗೂಲಿ, ಧೋನಿ ಸಾಲಿಗೆ ಸೇರ್ಪಡೆ

ಆಡಿದ ಪ್ರತೀ ಪಂದ್ಯದಲ್ಲೂ ಒಂದಲ್ಲಾ ಒಂದು ದಾಖಲೆ ನಿರ್ಮಾಣ ಮಾಡುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕಿವೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ಸಾಧನೆ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೇ ಓವಲ್: ಆಡಿದ ಪ್ರತೀ ಪಂದ್ಯದಲ್ಲೂ ಒಂದಲ್ಲಾ ಒಂದು ದಾಖಲೆ ನಿರ್ಮಾಣ ಮಾಡುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕಿವೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ಸಾಧನೆ ಮಾಡಿದ್ದಾರೆ.
ಹೌದು.. ಕಿವೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ ಒಟ್ಟು 74 ಎಸೆತಗಳನ್ನು ಎದುರಿಸಿದ ಕೊಹ್ಲಿ 60 ರನ್ ಗಳಿಸಿದ್ದರು. ಈ ಅರ್ಧಶತಕದ ಮೂಲಕ ತಮ್ಮ ಅರ್ಧಶತಕಗಳ ಸಂಖ್ಯೆಯನ್ನು (ದೇಶೀಯ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್) 100ಕ್ಕೆ ಏರಿಸಿಕೊಂಡರು. ಈ ಮೂಲಕ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ಹಾಗೂ ಮಹೇಂದ್ರ ಸಿಂಗ್ ಧೋನಿ ಸೇರಿದ ಎಲೈಟ್ ಪಟ್ಟಿಗೆ ವಿರಾಟ್ ಕೊಹ್ಲಿ ಸೇರ್ಪಡೆಯಾಗಿದ್ದಾರೆ. 
ಲಿಸ್ಟ್ ಎ ಕ್ರಿಕೆಟ್ ನಲ್ಲಿ ಸಚಿನ್ ಅತಿ ಹೆಚ್ಚು 174 ಅರ್ಧಶತಕಗಳ ಮೂಲಕ ಅಗ್ರ ಸ್ಥಾನದಲ್ಲಿದ್ದು,  133 ಅರ್ಧಶತಕಗಳನ್ನು ಹೊಂದಿರುವ ರಾಹುಲ್ ದ್ರಾವಿಡ್ 2ನೇ ಸ್ಥಾನದಲ್ಲಿದ್ದಾರೆ. ಅಂತೆಯೇ 128 ಅರ್ಧಶತಕಗಳನ್ನು ಹೊಂದಿರುವ ಸೌರವ್ ಗಂಗೂಲಿ 3 ಹಾಗೂ 101 ಅರ್ಧಶತಕಗಳನ್ನು ಹೊಂದಿರುವ ಮಹೇಂದ್ರ ಸಿಂಗ್ ಧೋನಿ 4ನೇ ಸ್ಥಾನದಲ್ಲಿದ್ದಾರೆ. ಅಂದ ಹಾಗೆ ಏಕದಿನದಲ್ಲಿ ಇದು ಕೊಹ್ಲಿ ಬ್ಯಾಟ್‌ನಿಂದ ಸಿಡಿದ 49ನೇ ಅರ್ಧಶತಕವಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com