4ನೇ ಏಕದಿನ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಹೀನಾಯ ಸೋಲು

ಆತಿಥೇಯ ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.
ಟ್ರೆಂಟ್ ಬೌಲ್ಟ್
ಟ್ರೆಂಟ್ ಬೌಲ್ಟ್
ಹ್ಯಾಮಿಲ್ಟನ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.
ಬಾರತ ನೀಡಿದ್ದ 93 ರನ್ ಗಳ ಅಲ್ಪ ಮೊತ್ತದ ಗುರಿಯನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ಕೇವಲ 14.4 ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ  93 ರನ್ ಗಳಿ ಗುರಿ ಮುಟ್ಟಿತು. ಭಾರತದಂತೆಯೇ ನ್ಯೂಜಿಲೆಂಡ್ ತಂಡ ಕೂಡ ಆರಂಭಿಕ ಆಘಾತ ಎದುರಿಸಿತು. 14 ರನ್ ಗಳಿಸಿದ್ದ ಮಾರ್ಟಿನ್ ಗಪ್ಟಿಲ್ ಭುವನೇಶ್ವರ್ ಕುಮಾರ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು. ಬಳಿಕ 11 ರನ್ ಗಳಿಸಿದ್ದ ನಾಯಕ ಕೇನ್ ವಿಲಿಯಮ್ಸನ್ ಕೂಡ ಭುವಿಗೆ ವಿಕೆಟ್ ಒಪ್ಪಿಸಿದರು.
ಬಳಿಕ ಜೊತೆಗೂಡಿದ ಹೆನ್ರಿಕ್ ನಿಕೋಲ್ಸ್ (ಅಜೇಯ 30 ರನ್) ಮತ್ತು ರಾಸ್ ಟೇಲರ್ (ಅಜೇಯ 37 ರನ್) ಗೆಲುವಿನ ಔಪಚಾರಿಕತೆ ಮುಗಿಸಿದರು.
ಭಾರತದ ಪರ ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆದರು.  ವಿಕೆಟ್ ಪಡೆದು ಭಾರತದ ಕುಸಿತಕ್ಕೆ ಕಾರಣರಾದ ಟ್ರೆಂಟ್ ಬೌಲ್ಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com