ಭಾರತ-ಮೈಕಲ್ ವಾನ್
ಕ್ರಿಕೆಟ್
ಅಬ್ಬಾ! ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ಗೆ ಟೀಂ ಇಂಡಿಯಾ ಎದುರಾಳಿಯಾಗಲಿಲ್ಲ: ಮೈಕಲ್ ವಾನ್ ಲೆಕ್ಕಾಚಾರವೇನು?
ಲೀಗ್ ಹಂತದಲ್ಲಿ ಟೀಂ ಇಂಡಿಯಾ ವಿರುದ್ಧ ಪಂದ್ಯ ಗೆದ್ದ ವಿಶ್ವಾಸದಲ್ಲಿದ್ದರೂ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ಗೆ ಟೀಂ ಇಂಡಿಯಾ ಎದುರಾಳಿಯಾಗಲಿಲ್ಲ ಎಂದು ಮಾಜಿ ನಾಯಕ ಮೈಕಲ್ ವಾನ್ ಟ್ವೀಟ್...
ಲಂಡನ್: ಲೀಗ್ ಹಂತದಲ್ಲಿ ಟೀಂ ಇಂಡಿಯಾ ವಿರುದ್ಧ ಪಂದ್ಯ ಗೆದ್ದ ವಿಶ್ವಾಸದಲ್ಲಿದ್ದರೂ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ಗೆ ಟೀಂ ಇಂಡಿಯಾ ಎದುರಾಳಿಯಾಗಲಿಲ್ಲ ಎಂದು ಮಾಜಿ ನಾಯಕ ಮೈಕಲ್ ವಾನ್ ಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ.
ಐಸಿಸಿ ವಿಶ್ವಕಪ್ ಕ್ರಿಕೆಟ್ ಅಂಕಪಟ್ಟಿಯಲ್ಲಿದ್ದ ಆಸ್ಟ್ರೇಲಿಯಾ ತಂಡ ಲೀಗ್ ಹಂತದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತು 2ನೇ ಸ್ಥಾನಕ್ಕೆ ಕುಸಿದಿದ್ದು ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದ್ದ ಭಾರತ ಅಗ್ರಸ್ಥಾನಕ್ಕೇರಿದೆ. ಈ ಮೂಲಕ ಸೆಮಿಫೈನಲ್ ನಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ.
ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್, ಟೀಂ ಇಂಡಿಯಾ ಇಂಗ್ಲೆಂಡ್ ಗೆ ಎದುರಾಳಿಯಾಗಲಿದೆ ಎಂದು ಭಾವಿಸಿದ್ದೇವು. ಅದೃಷ್ಟವಶಾತ್ ಸೆಮಿಸ್ ಲೆಕ್ಕಾಚಾರ ಉಲ್ಟಾಪಲ್ಟಾ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮೊದಲಿಗೆ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಸೋಲುವುದಿಲ್ಲ ಎಂದು ಭಾವಿಸಲಾಗಿತ್ತು. ಆದರೆ ಆಸ್ಟ್ರೇಲಿಯಾ ಸೋಲು ಕೆಲವು ಬದಲಾವಣೆಗಳನ್ನು ಮಾಡಿದೆ. ಮೊದಲಿಗೆ ಇಂಗ್ಲೆಂಡ್ ಮತ್ತು ಟೀಂ ಇಂಡಿಯಾ ಸೆಮಿಫೈನಲ್ ನಲ್ಲಿ ಮುಖಾಮುಖಿಯಾಗಲಿವೆ ಎಂದು ಭಾವಿಸಲಾಗಿತ್ತು. ಆದರೆ ಇದೀಗ ನ್ಯೂಜಿಲ್ಯಾಂಡ್ ಟೀಂ ಇಂಡಿಯಾ ಮುಖಾಮುಖಿಯಾಗಲಿದ್ದು ಇಂಗ್ಲೆಂಡ್ ಗೆ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.
Then realise you got Australia
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ