ಇಂಗ್ಲೆಂಡ್‌ ವಿಶ್ವಕಪ್‌ ಗೆಲ್ಲುವ ಫೇವರಿಟ್‌ ತಂಡ: ನ್ಯೂಜಿಲೆಂಡ್ ನಾಯಕ ವಿಲಿಯಮ್ಸನ್‌ ಅಚ್ಚರಿ ಹೇಳಿಕೆ

ಇಂದು ಲಾರ್ಡ್ಸ್ ನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಅತಿಥೇಯ ಇಂಗ್ಲೆಂಡ್ ತಂಡ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎಂದು ಪ್ರಶಸ್ತಿಗಾಗಿ ಸೆಣಸುತ್ತಿರುವ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಲಂಡನ್‌: ಇಂದು ಲಾರ್ಡ್ಸ್ ನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಅತಿಥೇಯ ಇಂಗ್ಲೆಂಡ್ ತಂಡ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎಂದು ಪ್ರಶಸ್ತಿಗಾಗಿ ಸೆಣಸುತ್ತಿರುವ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಐಸಿಸಿ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್, 'ಇಂದು ನಡೆಯುವ ಐಸಿಸಿ ವಿಶ್ವಕಪ್‌ ಫೈನಲ್‌ ಪಂದ್ಯ ಗೆಲ್ಲುವಲ್ಲಿ ಆತಿಥೇಯ ಇಂಗ್ಲೆಂಡ್‌ ಫೇವರಿಟ್‌ ತಂಡವಾಗಿದೆ. ಆದರೆ, ನಾವು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನ ತೋರುತ್ತೇವೆ ಎಂದು ಹೇಳಿದ್ದಾರೆ.
ಇಂಗ್ಲೆಂಡ್‌ ಈ ಬಾರಿ ವಿಶ್ವಕಪ್‌ ಗೆಲ್ಲುವ ತಂಡವೆಂದು ಎಲ್ಲ ಕಡೆಯಿಂದ ಕೇಳಿಬರುತ್ತಿದೆ. ನಿಜಕ್ಕೂ ಆತಿಥೇಯರು ವಿಶ್ವಕಪ್‌ ಗೆಲ್ಲುವ ಫೇವರಿಟ್‌ಗೆ ಅರ್ಹರಾಗಿದ್ದಾರೆ. ಆದರೆ ನಾವು ಉತ್ತಮ ಕ್ರಿಕೆಟ್ ಆಡಲು ಬಯಸುತ್ತಿದ್ದೇವೆ. ನಮ್ಮ ಸಾಮರ್ಥ್ಯಕ್ಕೆ ತಕ್ಕ ಆಟವಾಡಲಿದ್ದೇವೆ. ಫೈನಲ್ ಪಂದ್ಯಕ್ಕಾಗಿ ನಾವು ಕಾತುರರಾಗಿದ್ದೇವೆ ಎಂದು ವಿಲಿಯಮ್ಸನ್ ಹೇಳಿದ್ದಾರೆ.
ರೌಂಡ್‌ ರಾಬಿನ್‌ ಹಂತದಲ್ಲಿ ಒಂದು ಬಾರಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆತಿಥೇಯರ ವಿರುದ್ಧ 119 ರನ್‌ ಭಾರಿ ಅಂತರದಲ್ಲಿ ನ್ಯೂಜಿಲೆಂಡ್‌ ಸೋಲು ಅನುಭವಿಸಿತ್ತು. ಇದೇ ಲಯವನ್ನು ಇಂದಿನ ಫೈನಲ್‌ ಹಣಾಹಣಿಯಲ್ಲಿ ಮುಂದುವರಿಸುವ ತುಡಿತದಲ್ಲಿ ಇಂಗ್ಲೆಂಡ್ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com