ವಿಶ್ವಕಪ್ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮೊಹಮ್ಮದ್ ಅಮೀರ್

ಐಸಿಸಿ ವಿಶ್ವಕಪ್ ಟೂರ್ನಿ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗಿ ಮೊಹಮ್ಮದ್ ಅಮೀರ್ ಅವರು ಶುಕ್ರವಾರ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.
ಮೊಹಮ್ಮದ್ ಅಮೀರ್
ಮೊಹಮ್ಮದ್ ಅಮೀರ್
Updated on: 
ಇಸ್ಲಾಮಾಬಾದ್: ಐಸಿಸಿ ವಿಶ್ವಕಪ್ ಟೂರ್ನಿ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗಿ ಮೊಹಮ್ಮದ್ ಅಮೀರ್ ಅವರು ಶುಕ್ರವಾರ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.
ಸದ್ಯ ಟೆಸ್ಟ್ ಕ್ರಿಕೆಟ್ ಗೆ ಮಾತ್ರ ನಿವೃತ್ತಿ ಘೋಷಿಸಿದ್ದು ಏಕದಿನ ಹಾಗೂ ಟಿ-20 ಪಂದ್ಯಗಳಲ್ಲಿ ಆಡಲಿದ್ದಾರೆ. 
27 ವರ್ಷದ ಅಮೀರ್ ಅವರು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ)ಗೆ ಬರೆದ ಪತ್ರದಲ್ಲಿ ನಿವೃತ್ತಿ ವಿಚಾರವನ್ನು ಸ್ಪಷ್ಟ ಪಡಿಸಿದ್ದಾರೆ. ವೈಟ್ ಬೌಲ್ ಕ್ರಿಕೆಟ್ ಗೆ ಒತ್ತು ನೀಡುವ ಉದ್ದೇಶದಿಂದಲೇ ಅಮೀರ್, ಟೆಸ್ಟ್ ಗೆ ವಿದಾಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com