ಕ್ರಿಕೆಟ್ ವಿಶ್ವಕಪ್ ಸ್ವಿಮ್ಮಿಂಗ್‌ನಲ್ಲಿ ಗೆಲ್ಲೋರ್ಯಾರು? ಅಭಿಮಾನಿಗಳಿಂದ ಹಾಸ್ಯಾತ್ಮಕ ಮೀಮ್, ಮಳೆ ಟ್ರೋಲ್!

ವಿಶ್ವಕಪ್ ಟೂರ್ನಿಯಲ್ಲಿ ಹಲವು ಪಂದ್ಯಗಳು ಮಳೆಯಿಂದ ರದ್ದಾಗಿದ್ದು ಇದೀಗ ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ನಡುವಿನ ಪಂದ್ಯಕ್ಕೂ ವರುಣ ಅಡ್ಡಿಪಡಿಸಿದ್ದು ಇದರಿಂದ ಆಕ್ರೋಶಗೊಂಡಿರುವ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಹಲವು ಪಂದ್ಯಗಳು ಮಳೆಯಿಂದ ರದ್ದಾಗಿದ್ದು ಇದೀಗ ನ್ಯೂಜಿಲ್ಯಾಂಡ್ ಮತ್ತು ಟೀಂ ಇಂಡಿಯಾ ನಡುವಿನ ಪಂದ್ಯಕ್ಕೂ ವರುಣ ಅಡ್ಡಿಪಡಿಸಿದ್ದು ಇದರಿಂದ ಆಕ್ರೋಶಗೊಂಡಿರುವ ಅಭಿಮಾನಿಗಳು ಮಳೆಯ ಬಗ್ಗೆ ಟ್ರೋಲ್ ಮಾಡುತ್ತಿದ್ದಾರೆ.
ಸದ್ಯದ ವಿಶ್ವಕಪ್ ಟೂರ್ನಿಯಲ್ಲಿ ಮಳೆಯ ಕಾಟವೇ ಪ್ರಮುಖ ಚರ್ಚಾ ವಿಷಯವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹಲವು ಹಾಸ್ಯಾತ್ಮಕ ಮೀಮ್ ಮತ್ತು ಟ್ವೀಟ್ ಗಳನ್ನು ಮಾಡುತ್ತಿದ್ದಾರೆ.
ಇನ್ನು ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ತಂಡಗಳು ಇದುವರೆಗೆ ಸೋಲನ್ನು ಅನುಭವಿಸಿಲ್ಲ. ಟೀಂ ಇಂಡಿಯಾ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ನ್ಯೂಜಿಲ್ಯಾಂಡ್ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com