ಇಂಡೋ-ಪಾಕ್ ಹೈ ವೋಲ್ಟೇಜ್ ಕದನ: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ

ತೀವ್ರ ಕುತೂಹಲ ಕೆರಳಿಸಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಟಾಸ್ ಗೆದ್ದ ಭಾರತ
ಟಾಸ್ ಗೆದ್ದ ಭಾರತ
Updated on: 
ಲಂಡನ್: ತೀವ್ರ ಕುತೂಹಲ ಕೆರಳಿಸಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಅಹ್ಮದ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ.
ಹಾಲಿ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅತ್ಯಂತ ಕುತೂಹಲ ಕೆರಳಿಸಿರುವ ಪಂದ್ಯ ಇದಾಗಿದ್ದು. ಈ ಪ್ರಮುಖ ಪಂದ್ಯದಲ್ಲಿ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಗಾಯಳು ಶಿಖರ್ ಧವನ್ ಬದಲು ತಂಡದಲ್ಲಿ ಆಲ್ರೌಂಡರ್ ವಿಜಯ್ ಶಂಕರ್ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಶಂಕರ್ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಈ ಬಾರಿಯ ವಿಶ್ವಕಪ್​​ನಲ್ಲಿ ಭಾರತ ಆಡಿರುವ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಭರ್ಜರಿ ಜಯ ಸಾಧಿಸಿದರೆ, ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೀಗಾಗಿ 5 ಅಂಕದೊಂದಿಗೆ 4ನೇ ಸ್ಥಾನದಲ್ಲಿದೆ. ಇತ್ತ ಪಾಕಿಸ್ತಾನ ಆಡಿರುವ 4 ಪಂದ್ಯಗಳಲ್ಲಿ ಕೇವಲ ಒಂದನ್ನು ಗೆದ್ದರೆ, ಎರಡು ಪಂದ್ಯ ಸೋಲುಂಡಿದೆ. ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿ 3 ಅಂಕದೊಂದಿಗೆ 9ನೇ ಸ್ಥಾನದಲ್ಲಿದೆ. 
ತಂಡಗಳು ಇಂತಿವೆ
ಭಾರತ
ರೋಹಿತ್ ಶರ್ಮಾ, ಕೆ ಎಲ್ ರಾಹುಲ್, ವಿರಾಟ್ ಕೊಹ್ಲಿ (ನಾಯಕ), ವಿಜಯ್ ಶಂಕರ್, ಎಂಎಸ್ ಧೋನಿ (ವಿಕೆಟ್ ಕೀಪರ್), ಕೇದರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ.
ಪಾಕಿಸ್ತಾನ ತಂಡ
ಸರ್ಫರಾಜ್ ಅಹ್ಮದ್ (ನಾಯಕ, ವಿಕೆಟ್ ಕೀಪರ್), ಇಮಾಮ್ ಉಲ್ ಹಖ್, ಫಖರ್ ಜಮಾನ್, ಬಾಬರ್ ಅಜಾಮ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಇಮಾದ್ ವಾಸಿಮ್, ಶಬಾದ್ ಖಾನ್, ಹಸನ್ ಅಲಿ, ವಹಾಬ್ ರಿಯಾಜ್, ಮೊಹಮ್ಮದ್ ಅಮಿರ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com