ಮೊಹಮ್ಮದ್ ಶಮಿ ವಿಶ್ವಕಪ್ ಕ್ರಿಕೆಟ್ ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ 2ನೇ ಭಾರತೀಯ ಆಟಗಾರ

ವೇಗಿ ಭುವನೇಶ್ವರ್ ಕುಮಾರ್ ಬದಲಿಗೆ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಆಡಿದ ಮೊಹಮ್ಮದ್ ಶಮಿ, ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಮೊಹಮ್ಮದ್ ಶಮಿ
ಮೊಹಮ್ಮದ್ ಶಮಿ
ಸೌಂಥೆಪ್ಟನ್ : ವೇಗಿ ಭುವನೇಶ್ವರ್ ಕುಮಾರ್ ಬದಲಿಗೆ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಆಡಿದ ಮೊಹಮ್ಮದ್ ಶಮಿ, ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಕೊನೆಯ ಓವರ್ ನಲ್ಲಿ ಅಫ್ಘಾನಿಸ್ತಾನ ಗೆಲ್ಲಲು 16 ರನ್ ಗಳ ಅವಶ್ಯಕತೆ ಇತ್ತು. ಈ ಸಂದರ್ಭದಲ್ಲಿ ಚಾಕಚಕ್ಯತೆಯಿಂದ ಬೌಲಿಂಗ್ ದಾಳಿ ನಡೆಸಿದ ಮೊಹಮ್ಮದ್ ಶಮಿ, ಹ್ಯಾಟ್ರಿಕ್ ವಿಕೆಟ್ ಕಬಳಿಸುವ ಮೂಲಕ ನಿರಾಸರಾಗಿದ್ದ ಟೀಂ ಇಂಡಿಯಾ ಅಭಿಮಾನಿಗಳಲ್ಲಿ ಸಂತಸವನ್ನುಂಟು ಮಾಡಿದರು. 
ಬಂಗಾಳದ 28 ವರ್ಷದ ಶಮಿ, ಅಫ್ಘಾನಿಸ್ತಾನದ ನಬಿ, ಅಲಮ್ ಹಾಗೂ ಉರ್ ರೆಹಮಾನ್ ಅವರನ್ನು ಒಬ್ಬರಾದ ನಂತರ ಮತ್ತೊಬ್ಬರಂತೆ ಫೆವಿಲಿಯನ್ ಗೆ ಅಟ್ಟುವ ಮೂಲಕ ಟೀಂ ಇಂಡಿಯಾ ಗೆಲ್ಲುವಿನ ಸಂಭ್ರಮಕ್ಕೆ ಕಾರಣರಾದರು.
1987 ರಲ್ಲಿ ನಾಗಪುರದಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶರ್ಮಾ ಹ್ಯಾಟ್ರಿಕ್ ವಿಕೆಟ್ ಪಡೆದ  ಮೊದಲ ಭಾರತೀಯ ಆಟಗಾರ ಎಂಬ ಹೆಸರಿಗೆ ಪಾತ್ರರಾಗಿದ್ದರು.  ಅವರ ನಂತರ ಮೊಹಮ್ಮದ್ ಶಮಿ ಇದೀಗ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com