ದಕ್ಷಿಣ ಆಫ್ರಿಕಾ ವಿಶ್ವಕಪ್ ಟೂರ್ನಿಯಿಂದ ಹೊರ ಬೀಳಲು ಐಪಿಎಲ್ ಕಾರಣ: ಡುಪ್ಲೆಸಿಸ್

ಚೋಕರ್ಸ್ ಹಣೆಪಟ್ಟಿ ಹೊಂದಿರುವ ದಕ್ಷಿಣ ಆಫ್ರಿಕಾ ಕೊನೆಗೂ ಪ್ರಸಕ್ತ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದು ಇದಕ್ಕೆ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಕಾರಣ ಎಂದು ದಕ್ಷಿಣ ಆಫ್ರಿಕಾ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಲಂಡನ್: ಚೋಕರ್ಸ್ ಹಣೆಪಟ್ಟಿ ಹೊಂದಿರುವ ದಕ್ಷಿಣ ಆಫ್ರಿಕಾ ಕೊನೆಗೂ ಪ್ರಸಕ್ತ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದು ಇದಕ್ಕೆ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಕಾರಣ ಎಂದು ದಕ್ಷಿಣ ಆಫ್ರಿಕಾ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.
ನಿನ್ನೆ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲೂ ದಕ್ಷಿಣ ಆಫ್ರಿಕಾ ಹೀನಾಯ ಸೋಲು ಕಂಡಿದ್ದು ಏಳು ಪಂದ್ಯಗಳ ಪೈಕ್ ಆರು ಪಂದ್ಯಗಳಲ್ಲಿ ಸೋಲು ಕಂಡಿರುವ ತಂಡ ಟೂರ್ನಿಯಿಂದ ಹೊರಬಿದ್ದಿದೆ. 
ಇನ್ನು ಪಂದ್ಯದ ಬಳಿಕ ಫಾಫ್ ಡುಪ್ಲೆಸಿಸ್ ಹೇಳಿಕೆ ಅನೇಕರ ಕೆಂಗಣ್ಣಿಗೆ ಗುರಿಯಾಗಿದೆ. ದಕ್ಷಿಣ ಆಫ್ರಿಕಾದ ಟ್ರಂಪ್ ಕಾರ್ಡ್ ಆಗಿದ್ದ ವೇಗಿ ಕಗಿಸೋ ರಬಾಡ ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ ನೀಡಲು ಐಪಿಎಲ್ ಕಾರಣ ಎಂದು ಹೇಳಿದ್ದಾರೆ.
ರಬಾಡ ಐಪಿಎಲ್ ನಲ್ಲಿ ಆಡದಿರುವಂತೆ ತಡೆಯಲು ಟೀಂ ಮ್ಯಾನೇಜ್ ಮೆಂಟ್ ಸಾಕಷ್ಟು ಪ್ರಯತ್ನ ಮಾಡಿತ್ತು. ಆದರೂ ರಬಾಡ ಐಪಿಎಲ್ ನಲ್ಲಿ ಆಡಿ ದೈಹಿಕವಾಗಿ ದಣಿದಿದ್ದರು. ಅಲ್ಲದೆ ಐಪಿಎಲ್ ಟೂರ್ನಿಯ ಅಂತ್ಯದಲ್ಲಿ ರಬಾಡ ಗಾಯಗೊಂಡಿದ್ದು ಇದು ವಿಶ್ವಕಪ್ ಮೇಲೆ ಪರಿಣಾಮ ಬೀರಿತು ಎಂದು ಡುಪ್ಲೆಸಿಸ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com