ವಿಶ್ವಕಪ್‌ನಲ್ಲಿ ಅಜೇಯ ಓಟ: ಇಂಗ್ಲೆಂಡ್ ಹಿಂದಿಕ್ಕಿ ಭಾರತ ನಂ.1, ಕೊಹ್ಲಿ, ಬುಮ್ರಾಗೆ ಅಗ್ರಸ್ಥಾನ!

ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅಜೇಯ ಓಟ ಮುಂದುವರೆಸಿದ್ದು ಇನ್ನು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ದುಬೈ: ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅಜೇಯ ಓಟ ಮುಂದುವರೆಸಿದ್ದು ಇನ್ನು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದೆ. ಇದರ ಜೊತೆಗೆ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಮತ್ತು ವಿರಾಟ್ ಕೊಹ್ಲಿ ಸಹ ನಂಬರ್ ಸ್ಥಾನದಲ್ಲಿದ್ದಾರೆ.
ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಆಡಿರುವ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 123 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದೆ. ಇನ್ನು ಇಂಗ್ಲೆಂಡ್ 3 ಪಂದ್ಯಗಳಲ್ಲಿ ಸೋಲು ಕಂಡು 122 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 
ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ.
ಜಸ್ ಪ್ರೀತ್ ಬುಮ್ರಾ ಸಹ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದು 774 ಅಂಕಗಳನ್ನು ಗಳಿಸುವ ಮೂಲಕ ಅಗ್ರಸ್ಥಾನಕ್ಕೇರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com