ಆಪ್ಘಾನಿಸ್ತಾನ ನೀಡಿದ 228 ರನ್ ಗಳ ಗುರಿಯನ್ನು ಹಿಂಬಾಲಿಸಿದ ಪಾಕಿಸ್ತಾನ ತಂಡ 49.4 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 230 ರನ್ ಗಳಿಸಿ ಗುರಿ ಮುಟ್ಟಿತು. ಪಾಕಿಸ್ತಾನಕ್ಕೆ ಆರಂಭದಲ್ಲೇ ಆಘಾತ ನೀಡಿದ ಆಫ್ಘನ್ ಬೌಲರ್ ಮುಜೀಬ್, ಫಕರ್ ಜಮಾನ್ ರನ್ನು ಶೂನ್ಯಕ್ಕೆ ಔಟ್ ಮಾಡಿದರು. ಬಳಿಕ ಇಮಾಮ್ ಉಲ್ ಹಕ್ ಮತ್ತು ಬಾಬರ್ ಅಜಾಮ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.