ಲೀಡ್ಸ್ನಲ್ಲಿ ನಡೆದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದ ವೇಳೆ ಉಭಯ ತಂಡಗಳ ಅಭಿಮಾನಿಗಳು ಪರಸ್ಪರ ಬಡಿದಾಡಿಕೊಂಡಿರುವ ಘಟನೆ ನಡೆದಿದೆ. ಪಂದ್ಯ ನಡೆಯುತ್ತಿರುವ ಹೆಡಿಂಗ್ಲೆ, ಕ್ರೀಡಾಂಗಣದ ಹೊರಗಡೆ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹೊಡೆದಾಡಿಕೊಂಡಿರುವ ವಿಡಿಯೋ ಸಖತ್ ವೈರಲ್ ಆಗಿದೆ.