ಐಸಿಸಿ ವಿಶ್ವಕಪ್ 2019ನಲ್ಲಿ ಮೂರು ಶತಕ ಸಿಡಿಸಿದ ಮೊದಲ ಆಟಗಾರ ರೋ'ಹಿಟ್' ಶರ್ಮಾ!

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತದ ಸ್ಫೋಟಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸುವ ಮೂಲಕ ಟೂರ್ನಿಯಲ್ಲಿ ಮೂರು ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ರೋಹಿತ್ ಶತಕ
ರೋಹಿತ್ ಶತಕ
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತದ ಸ್ಫೋಟಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸುವ ಮೂಲಕ ಟೂರ್ನಿಯಲ್ಲಿ ಮೂರು ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ನಲ್ಲಿ ನಡೆದೆ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ್ದ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ್ದ ಭಾರತ ತಂಡಕ್ಕೆ ಆರಂಭಿಕ ಆಟಗಾರ ರೋಹಿತ್ ಶರ್ಮಾ ಆಸರೆಯಾಗಿದ್ದರು. 106 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. 94.23 ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ರೋಹಿತ್ ಶರ್ಮಾ, 15 ಬೌಂಡರಿಗಳ ಸಮೇತ ಶತಕ ಸಿಡಿಸಿದರು.
ಹಾಲಿ ಶತಕ ರೋಹಿತ್ ಶರ್ಮಾ ಅವರ ವೃತ್ತಿ ಜೀವನ 25ನೇ ಶತಕವಾಗಿದ್ದು, ಹಾಲಿ ವಿಶ್ವಕಪ್ ಸರಣಿಯ ಮೂರನೇ ಶತಕವಾಗಿದೆ. ಈ ಹಿಂದೆ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನದ ವಿರುದ್ಧ ಶತಕ ಸಿಡಿಸಿದ್ದರು. ಅಂತೆಯೇ ಟೂರ್ನಿಯಲ್ಲಿ ಒಟ್ಟು 440 ರನ್ ಸಿಡಿಸಿದ್ದು, ಗರಿಷ್ಠ ರನ್ ಗಳಿಸಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ.
ಇಂಗ್ಲೆಂಡ್ ನೆಲದಲ್ಲಿ ಶತಕದಲ್ಲೂ ದಾಖಲೆ
ಇನ್ನು ಹಾಲಿ ಶತಕದ ಮೂಲಕ ರೋಹಿತ್ ಶರ್ಮಾ ಇಂಗ್ಲೆಂಡ್ ನೆಲದಲ್ಲಿ ಶತಕಗಳ ದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಮೊದಲ ವಿದೇಶಿ ಆಟಗಾರ ಎಂಬ ಕೀರ್ತಿಗೆ ರೋಹಿತ್ ಶರ್ಮಾ ಭಾಜನರಾಗಿದ್ದಾರೆ. ಈ ವರೆಗೂ ಇಂಗ್ಲೆಂಡ್ ನಲ್ಲಿ ರೋಹಿತ್ ಶರ್ಮಾ 5 ಶತಕ ಸಿಡಿಸಿದ್ದು, ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ 4 ಶತಕ ಸಿಡಿಸಿದ್ದಾರೆ. ಅಂತೆಯೇ ಶಿಖರ್ ಧವನ್ 4 ಮತ್ತು ವಿಂಡೀಸ್ ದಂತಕಥೆ ವಿವಿಯನ್ ರಿಚರ್ಡ್ಸ್ 4 ಶತಕ ಸಿಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com