ಕನ್ನಡದಲ್ಲಿ ತಪ್ಪಾಗಿ ಟ್ಯಾಟೂ ಬರೆಸಿಕೊಂಡ ಹಾರ್ದಿಕ್ ಪಾಂಡ್ಯ, ಕನ್ನಡಿಗರಿಂದ ಟ್ರೋಲ್!

ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಈ ಹಿಂದೆ ಮಹಿಳೆಯರ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿ ವಿವಾದಕ್ಕೆ ಗುರಿಯಾಗಿದ್ದರು. ಇದೀಗ ತಮ್ಮ ಕೈ ಮೇಲೆ 16 ಭಾಷೆಗಳಲ್ಲಿ ಹೆಸರನ್ನು ಹಚ್ಚೆ...
ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ
ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಈ ಹಿಂದೆ ಮಹಿಳೆಯರ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿ ವಿವಾದಕ್ಕೆ ಗುರಿಯಾಗಿದ್ದರು. ಇದೀಗ ತಮ್ಮ ಕೈ ಮೇಲೆ 16 ಭಾಷೆಗಳಲ್ಲಿ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದು ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ಹೌದು, ಹಾರ್ದಿಕ್ ಪಾಂಡ್ಯ ಒಟ್ಟು 16 ಭಾಷೆಯಲ್ಲಿ ತಮ್ಮ ಹೆಸರನ್ನು ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಕನ್ನಡ ಭಾಷೆಯಲ್ಲೂ ತಮ್ಮ ಹೆಸರನ್ನು ಹಾಕಿಕೊಂಡಿದ್ದಾರೆ. ಇದು ಖುಷಿಯ ಸಂಗತಿ. ಆದರೆ ಕನ್ನಡದಲ್ಲಿ ತಪ್ಪು ತಪ್ಪಾಗಿ ಹಾರ್ಡಿಕ್ (ಹಾರ್ದಿಕ್) ಎಂದು ಬರೆಸಿಕೊಂಡಿದ್ದಾರೆ. ಇದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com