ಹೌದು.. ಏಕದಿನ ಕ್ರಿಕೆಟ್ ನಲ್ಲಿ ಭಾರತದ ಪರ ಅತೀ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನಕ್ಕೇರಿದ್ದು, ಗಂಗೂಲಿ ಅವರನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದಾರೆ. ನಿನ್ನೆಯ ಪಂದ್ಯವೂ ಸೇರಿದಂತೆ ಏಕದಿನದಲ್ಲಿ ಕೊಹ್ಲಿ (224 ಪಂದ್ಯಗಳು) ಒಟ್ಟು 32 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು, 31 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಗಳಿಸಿರುವ ದಾದಾ (308 ಪಂದ್ಯಗಳು) ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.