ಆಸ್ಟ್ರೇಲಿಯಾ ವಿರುದ್ಧ 5ನೇ ಏಕದಿನ ಪಂದ್ಯ: ಭಾರತಕ್ಕೆ 273 ರನ್ ಗುರಿ

Published On :
ನವದೆಹಲಿ: ಭಾರತ ತಂಡದ ವಿರುದ್ಧ ಅಂತಿಮ ಹಾಗೂ 5ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಆಸ್ಟ್ರೇಲಿಯಾ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 272 ರನ್ ದಾಖಲಿಸಿದೆ.
ಭಾರತಕ್ಕೆ ಗೆಲ್ಲಲು 273 ರನ್ ಗಳು ಬೇಕಿದೆ. ಆಸ್ಟ್ರೇಲಿಯಾ ಪರ ಉಸ್ಮಾನ್ ಖವಾಜ 106 ಎಸೆತಗಳಲ್ಲಿ ಆಕರ್ಷಕ ಶತಕ ದಾಖಲಿಸಿ ತಂಡಕ್ಕೆ ನೆರವಾದರು. ಪೀಟರ್ ಹ್ಯಾಂಡ್ಸ್ಕೋಂಬ್ 60 ಎಸೆತಗಳಲ್ಲಿ 52 ರನ್ ದಾಖಲಿಸಿದ್ದನ್ನು ಹೊರತುಪಡಿಸಿದರೆ ಉಳಿದ ಆಟಗಾರರು ಭಾರತದ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗದೇ 30 ರನ್ ತಲುಪುವುದಕ್ಕೂ ಮುನ್ನವೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ನತ್ತ ನಡೆದರು.
ಭುವನೇಶ್ವರ್ ಕುಮಾರ್ 48 ರನ್ ನೀಡಿ 3 ವಿಕೆಟ್ ಪಡೆದರೆ ಮೊಹಮ್ಮದ್ ಶಮಿ 57 ರನ್ ನೀಡಿ 2 ವಿಕೆಟ್, ರವೀಂದ್ರ ಜಡೇಜಾ 45 ರನ್ ನೀಡಿ 2 ವಿಕೆಟ್, ಕುಲ್ದೀಪ್ ಯಾದವ್ 74 ರನ್ ನೀಡಿ 1 ವಿಕೆಟ್ ಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


