ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್‌ ಮೇಲಿನ ಅಜೀವ ನಿಷೇಧ ತೆರವುಗೊಳಿಸಿದ ಸುಪ್ರೀಂ ಕೋರ್ಟ್!

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಸಂಬಂಧ ಶ್ರೀಶಾಂತ್ ಮೇಲಿದ್ದ ಅಜೀವ ನಿಷೇಧವನ್ನು ದೇಶದ ಸರ್ವೋಚ್ಚ ನ್ಯಾಯಾಲಯ ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ.
ಶ್ರೀಶಾಂತ್
ಶ್ರೀಶಾಂತ್
ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಸಂಬಂಧ ಶ್ರೀಶಾಂತ್ ಮೇಲಿದ್ದ ಅಜೀವ ನಿಷೇಧವನ್ನು ದೇಶದ ಸರ್ವೋಚ್ಚ ನ್ಯಾಯಾಲಯ ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ.
ಸ್ಪಾಟ್ ಫಿಕ್ಸಿಂಗ್ ಸಂಬಂಧ ಬಿಸಿಸಿಐ ಶಿಸ್ತು ಸಮಿತಿಯು ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿತ್ತು. ಈ ನಿಷೇಧವನ್ನು ತೆರವುಗೊಳಿಸಿರುವ ಸುಪ್ರೀಂ ಕೋರ್ಟ್ ಶಿಕ್ಷೆಯ ಪರಿಮಾಣವನ್ನು ಮೂರು ತಿಂಗಳೊಳಗೆ ಪ್ರಕಟಿಸುವಂತೆ ಬಿಸಿಸಿಐಗೆ ಸೂಚಿಸಿದೆ.
ನ್ಯಾಯಮೂರ್ತಿ ಅಶೋಕ್ ಭೂಷಣ್ ಹಾಗೂ ಕೆಎಂ ಜೋಸೆಫ್ ಸೇರಿದ ಸದಸ್ಯ ಪೀಠವೂ ಈ ಮಹತ್ತರ ತೀರ್ಪು ನೀಡಿದೆ. ಇನ್ನು ಬಿಸಿಸಿಐ ವಿಧಿಸುವ ಶಿಕ್ಷೆಯ ಪರಿಮಾಣವನ್ನು ಪ್ರಶ್ನಿಸುವ ಹಕ್ಕು ಕೂಡಾ ಶ್ರೀಶಾಂತ್ ಗೆ ಇರಲಿದೆ ಎಂದು ಪೀಠ ಸ್ಪಷ್ಟಪಡಿಸಿದೆ.
2013ರಲ್ಲಿ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಬಿಸಿಸಿಐ ಅಜೀವ ನಿಷೇಧವನ್ನು ಕೇರಳ ಹೈಕೋರ್ಟ್ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಶ್ರೀಶಾಂತ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com