ಹ್ಯಾಗ್ಲೆ ಪಾರ್ಕ್ ಸಮೀಪ ಮಸೀದಿಯಲ್ಲಿ ಶೂಟೌಟ್ ನಡೆದಿದ್ದು, ಬಂದೂಕು ಧಾರಿಯೋರ್ವ ಆಟೋಮ್ಯಾಟಿಕ್ ಮಷಿನ್ ಗನ್ ಮೂಲಕ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಮಸೀದಿ ಸಮೀಪ 6 ಜನರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮಸೀದಿ ಸಮೀಪ ನಾಲ್ಕೈದು ಹೆಣಗಳು ಕಂಡಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ಇದೊಂದು ಭಯೋತ್ಪಾದನಾ ದಾಳಿ ಎನ್ನಲಾಗಿದೆ. ಆಸ್ಟ್ರೇಲಿಯಾ ಮೂಲದ ವ್ಯಕ್ತಿ ಈ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಇನ್ನು ಹ್ಯಾಗ್ಲೆ ಪಾರ್ಕ್ ಸಮೀಪ ಮಸೀದಿಯಲ್ಲಿ ಶೂಟೌಟ್ ನಡೆದಿದ್ದು, ಬಂದೂಕು ಧಾರಿಯೋರ್ವ ಆಟೋಮ್ಯಾಟಿಕ್ ಮಷಿನ್ ಗನ್ ಮೂಲಕ ಗುಂಡಿನ ದಾಳಿ ನಡೆಸಿದ್ದ. ಮೂಲಗಳ ಪ್ರಕಾರ ಕ್ರಿಕೆಟ್ ಆಟಗಾರರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆದಿದೆಯೇ ಎನ್ನುವ ಅನುಮಾನ ಕಾಡಿದೆ. ಹ್ಯಾಗ್ಲೆ ಪಾರ್ಕ್ ಸಮೀಪ ಇದ್ದ ಮಸೀದಿ ಬಳಿ ಬಾಂಗ್ಲಾ ಕ್ರಿಕೆಟ್ ತಂಡ ತೆರಳಿತ್ತು. ಗುಂಡಿನ ದಾಳಿ ನಡೆದ ನಂತರ ಎಲ್ಲ ಆಟಗಾರರು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಬಾಂಗ್ಲಾ ದೇಶದ ಪತ್ರಕರ್ತ ಮೊಹ್ಮದ್ ಇಸ್ಲಾಮ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಬಾಂಗ್ಲಾ ಕ್ರಿಕೆಟ್ ತಂಡ ಕೂದಲೆಳೆಯಲ್ಲಿ ಬಚಾವ್ ಆಗಿ ಪ್ರಾಣ ಉಳಿಸಿಕೊಂಡಿದೆ. ದೇವರು ನಮ್ಮನ್ನು ರಕ್ಷಿಸಿದ್ದಾರೆ ಎಂದು ಆಟಗಾರರು ಟ್ವೀಟ್ ಮಾಡಿಕೊಂಡಿದ್ದಾರೆ.
ಇನ್ನು ಕ್ರಿಕೆಟಿಗರ ಮೇಲಿನ ದಾಳಿ ಹಿನ್ನಲೆಯಲ್ಲಿ ನಾಳೆ ಹ್ಯಾಗ್ಲೆಯಲ್ಲಿ ನಡೆಯಬೇಕಿದ್ದ ನ್ಯೂಜಿಲೆಂಡ್-ಬಾಂಗ್ಲಾದೇಶದ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ನಾಳೆಯಿಂದ ಕ್ರೈಸ್ಟ್ ಚರ್ಚ್ ನಲ್ಲಿ ಮೂರನೇ ಟೆಸ್ಟ್ ಪಂದ್ಯ ನಡೆಯಬೇಕಿತ್ತು. ಆದರೆ ಶಂಕಿತ ಉಗ್ರ ದಾಳಿಯಿಂದಾಗಿ ನಾಳಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ.