ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದ ಕ್ರಿಕೆಟಿಗ ದಾಂಪತ್ಯ ಜೀವನಕ್ಕೆ ಎಂಟ್ರಿ!
ನ್ಯೂಜಿಲ್ಯಾಂಡ್ ಪ್ರವಾಸದಲ್ಲಿದ್ದ ಬಾಂಗ್ಲಾದೇಶ ಕ್ರಿಕೆಟ್ ತಂಡ ಅಲ್ಲಿನ ಮಸೀದಿಯೊಂದರಲ್ಲಿ ನಡೆದಿದ್ದ ಗುಂಡಿನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿ ತವರಿಗೆ ವಾಪಸ್ ಆಗಿದ್ದು ಇದೀಗ....
ಢಾಕಾ: ನ್ಯೂಜಿಲ್ಯಾಂಡ್ ಪ್ರವಾಸದಲ್ಲಿದ್ದ ಬಾಂಗ್ಲಾದೇಶ ಕ್ರಿಕೆಟ್ ತಂಡ ಅಲ್ಲಿನ ಮಸೀದಿಯೊಂದರಲ್ಲಿ ನಡೆದಿದ್ದ ಗುಂಡಿನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿ ತವರಿಗೆ ವಾಪಸ್ ಆಗಿದ್ದು ಇದೀಗ ಅದೇ ತಂಡದಲ್ಲಿದ್ದ ಕ್ರಿಕೆಟಿಗನೊಬ್ಬ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬಾಂಗ್ಲಾದೇಶದ ಆಫ್ ಸ್ಪಿನ್ನರ್ ಮೆಹಿದಿ ಹಸನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುದಿನದ ಗೆಳತಿ ರಬಿಯಾ ಅಖ್ತರ್ ಪ್ರೀತಿ ಜೊತೆ ವಿವಾಹವಾಗಿರುವುದಾಗಿ ತಿಳಿಸಿದ್ದಾರೆ.
ತಮ್ಮ ವಿವಾಹದ ಸುದ್ದಿಯನ್ನು ಮೆಹಿದಿ ಸಾಮಾಜಿಕ ಜಾಲಾತಣದಲ್ಲಿ ಹಂಚಿಕೊಂಡಿದ್ದಾರೆ. ಇಂದಿನಿಂದ ನನ್ನ ಜೀವನದ ಹೊಸ ಜರ್ನಿ ಆರಂಭಿಸಿದ್ದೇನೆ. ಇದಕ್ಕಾಗಿ ನನಗೆ ನಿಮ್ಮೆಲ್ಲರ ಆಶೀರ್ವಾದಬೇಕು ಎಂದು ಬರೆದುಕೊಂಡಿದ್ದಾರೆ.
ನ್ಯೂಜಿಲ್ಯಾಂಡ್ ನ ಕ್ರೈಸ್ಟ್ ಚರ್ಚ್ ಗೆ ಮೂರನೇ ಟೆಸ್ಟ್ ಪಂದ್ಯ ಆಡಲು ಬಂದಾಗ ಅಲ್ಲಿನ ಮಸೀದಿಗೆ ಕ್ರಿಕೆಟರ್ ಭೇಟಿ ನೀಡಿದ್ದ ವೇಳೆ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸುಮಾರು 49 ಮಂದಿ ಮೃತಪಟ್ಟಿದ್ದರು.