ನಿನ್ನೆ ಜೈಪುರದಲ್ಲಿ ರಾಜಸ್ಥಾನ ರಾಯಲ್ಸ್ ಹಾಗು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಮೊದಲ ಪಂದ್ಯದಲ್ಲಿ, ಜೋಸ್ ಬಟ್ಲರ್ ಔಟಾದ ರೀತಿ ಈಗ ಕ್ರಿಕೆಟ್ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್ ವೇಳೆ ಆರಂಭಿಕ ಆಟಗಾರ ಜಾಸ್ ಬಟ್ಲರ್ 69 ರನ್ ಗಳಿಸಿ ಭರ್ಜರಿಯಾಗಿ ಬ್ಯಾಟಿಂಗ್ ಮಾಡುತ್ತಿದ್ದರು. ಈ ವೇಳೆ ನಾನ್ ಸ್ಟ್ರೈಕರ್ ನಲ್ಲಿದ್ದ ಬಟ್ಲರ್, ಅಶ್ವಿನ್ ಬೌಲ್ ಹಾಕುವ ಮೊದಲೇ ಕ್ರೀಸ್ ಬಿಟ್ಟಿದ್ದರು. ಇದನ್ನ ನೋಡಿದ ಅಶ್ವಿನ್ ಬಾಲ್ ಎಸೆಯದೇ ವಿಕೆಟ್ ಎಗರಿಸಿ 'ಮಾಂಕಡ್ ರನೌಟ್'ಗಾಗಿ ಅಂಪೈರ್ ಗೆ ಮನವಿ ಮಾಡಿದರು. ಆದರೆ ಆನ್ ಫೀಲ್ಡ್ ಅಂಪೈರ್ ಥರ್ಡ್ ಅಂಪೈರ್ ಗೆ ಮೊರೆ ಹೋದರು. ಥರ್ಡ್ ಅಂಪೈರ್ ಬಟ್ಲರ್ ಔಟೆಂದು ತೀರ್ಪು ನೀಡಿದರು. ಇದರಿಂದ ಶಾಕ್ ಗೆ ಒಗೊಳಗಾದ ಬಟ್ಲರ್ ಅಶ್ವಿನ್ ಜೊತೆ ವಾಗ್ವಾದಕ್ಕಿಳಿದರು. ಕೊನೆಗೆ ಬೇರೆ ದಾರಿ ಇಲ್ಲದೆ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದ್ದರು.