ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ರವಿಚಂದ್ರನ್ ಅಶ್ವಿನ್ ಮಾಡಿದ ಮಂಕಡ್ ರನೌಟ್ ಇದೀಗ ವ್ಯಾಪಕ ಚರ್ಚೆ ಹುಟ್ಟುಹಾಕಿದೆ. ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟ್ಸ್’ಮನ್ ಜೋಸ್ ಬಟ್ಲರ್ ರನೌಟ್ ಇದೀಗ ಸಾಕಷ್ಟು ಪರ-ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ. ಕೆಲವರು ಅಶ್ವಿನ್ ಕ್ರೀಡಾ ನಿಯಮಕ್ಕೆ ತಕ್ಕಂತೆ ನಡೆದುಕೊಂಡಿದ್ದಾರೆ ಎಂದು ಸಮರ್ಥಿಸಿಕೊಂಡರೆ, ಮತ್ತೆ ಕೆಲವರು ಅಶ್ವಿನ್ ಕ್ರೀಡಾಸ್ಫೂರ್ತಿಯಿಂದ ನಡೆದುಕೊಂಡಿಲ್ಲ ಎಂದು ಟೀಕೆಯ ಮಳೆ ಸುರಿಸಿದ್ದಾರೆ. ಪಂದ್ಯ ಮುಕ್ತಾಯವಾದ ಬಳಿಕ ಮಾತನಾಡಿದ್ದ ಅಶ್ವಿನ್ ಇದು ಸಹಜ ಕ್ರಿಯೆ ಎಂದು ತಾವು ಮಾಡಿದ ರನೌಟ್ ಅನ್ನು ಸಮರ್ಥಿಸಿಕೊಂಡಿದ್ದರು.