ಮುಂಬೈ ಇಂಡಿಯನ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಗೆ 8 ವಿಕೆಟ್ ಗಳ ಭರ್ಜರಿ ಗೆಲುವು

ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಹಾಗೂ ಕ್ರಿಸ್ ಗೇಲ್​ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್‌ ಇಲೆವೆನ್‌ ಪಂಜಾಬ್‌....
ಕೆಎಲ್ ರಾಹುಲ್
ಕೆಎಲ್ ರಾಹುಲ್
Updated on: 
ಮೊಹಾಲಿ: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಹಾಗೂ ಕ್ರಿಸ್ ಗೇಲ್​ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್‌ ಇಲೆವೆನ್‌ ಪಂಜಾಬ್‌, ಮುಂಬೈ ಇಂಡಿಯನ್ಸ್‌ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ನಡುವಣ ಕಿಂಗ್ಸ್ ಇಲೆವೆನ್ ಪಂಜಾಬ್ ಭರ್ಜರಿ ಗೆಲುವು ಸಾಧಿಸಿದೆ.
ಇಂದು ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ ಇಂಡಿಯನ್ಸ್, ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್ ಸೇರಿಸಿತು.
ಗೆಲುವಿಗೆ 177 ರನ್ ಗಳ ಗುರಿ ಬೆನ್ನತ್ತಿದ ಕಿಂಗ್ಸ್ ಇಲೆವೆನ್ ಪಂಜಾಬ್, 18.4 ಓವರ್‌ಗಳಲ್ಲಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಇದರೊಂದಿಗೆ ಕಿಂಗ್ಸ್ ಇಲೆವೆನ್ ಐಪಿಎಲ್ 12ನೇ ಆವೃತ್ತಿಯಲ್ಲಿ ಎರಡನೇ ಗೆಲುವು ದಾಖಲಿಸಿದೆ.
ತಂಡದ ಪರ ಉತ್ತಮ ಆಟವಾಡಿದ ಕೆ.ಎಲ್‌. ರಾಹುಲ್‌, 71 ರನ್‌ ಸಿಡಿಸಿ ಅಜೇಯರಾಗಿ ಉಳಿದರು. ಇನ್ನು, ಮಯಾಂಕ್‌ ಅಗರ್‌ವಾಲ್‌ 43 ರನ್‌ ಸಿಡಿಸಿದ್ರೆ, ಕ್ರಿಸ್‌ ಗೇಲ್‌ 40 ರನ್‌ ಸಿಡಿಸಿ ಕಿಂಗ್ಸ್ ಇಲೆವೆನ್ ತಂಡದ ಗೆಲುವಿಗೆ ನೆರವಾದರು. 
ಇನ್ನು ಮುಂಬೈ ಇಂಡಿಯನ್ಸ್ ಪರ ಡಿ' ಕಾಕ್‌ ತಂಡದ ಆಸರೆಯಾಗಿದ್ದರು. 39 ಬಾಲ್‌ಗಳಲ್ಲಿ 60 ರನ್‌ ಸಿಡಿಸಿ ತಂಡದ ಸ್ಟಾರ್‌ ಪರ್ಫಾಮರ್ ಆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com