ಕೊಹ್ಲಿ ಬಳಿಕ ಎಂಎಸ್ ಧೋನಿ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾದ ಗೌತಮ್ ಗಂಭೀರ್!
ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಒಂದು ಟ್ರೋಫಿ ಗೆಲ್ಲಿಸದಿದ್ದರೂ ತಂಡದ ನಾಯಕರಾಗಿ ಮುಂದುವರೆದಿದ್ದಾರೆ ಎಂದು ಹೇಳುವ ಮೂಲಕ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ...
ನವದೆಹಲಿ: ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಒಂದು ಟ್ರೋಫಿ ಗೆಲ್ಲಿಸದಿದ್ದರೂ ತಂಡದ ನಾಯಕರಾಗಿ ಮುಂದುವರೆದಿದ್ದಾರೆ ಎಂದು ಹೇಳುವ ಮೂಲಕ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗೌತಮ್ ಗಂಭೀರ್ ಗುರಿಯಾಗಿದ್ದು ಇದೀಗ ಎಂಎಸ್ ಧೋನಿ ಅಭಿಮಾನಿಗಳ ಆಕ್ರೋಶಕ್ಕೂ ಗುರಿಯಾಗಿದ್ದಾರೆ.
ರಾಜಸ್ತಾನ್ ರಾಯಲ್ಸ್ ತಂಡದ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದನ್ನು ನೋಡಿ ಗಂಭೀರ್ ಅವರನ್ನು ಭಾರತ ಕಂಡ ಅತ್ಯಂತ ಶ್ರೇಷ್ಠ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂದು ಹೊಗಳಿಸಿದ್ದಾರೆ.
ಸಂಜು ಸ್ಯಾಮ್ಸನ್ ಅವರನ್ನು ಹೊಗಳುವ ಮೂಲಕ ಪರೋಕ್ಷವಾಗಿ ಎಂಎಸ್ ಧೋನಿಗೆ ಟಾಂಗ್ ಕೊಟ್ಟಿದ್ದು ಇದು ಧೋನಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದು ನಿಮಗೆ ಧೋನಿ ಬಗ್ಗೆ ಅದೆಷ್ಟು ಹೊಟ್ಟೆ ಕಿಚ್ಚು ಎಂದು ಕೆಲವರು ಲೇವಡಿ ಮಾಡಿದ್ದಾರೆ.