ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ದಿನೇಶ್ ಕಾರ್ತಿಕ್, ವಿಡಿಯೋ ನೋಡಿ ವ್ಹಾವ್ ಅಂತೀರಾ?

ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದಿರುವ ವಿಡಿಯೋ ವೈರಲ್ ಆಗಿದೆ.
ದಿನೇಶ್ ಕಾರ್ತಿಕ್
ದಿನೇಶ್ ಕಾರ್ತಿಕ್
Updated on

ರಾಂಚಿ: ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಡೈವ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದಿರುವ ವಿಡಿಯೋ ವೈರಲ್ ಆಗಿದೆ. 

ದೇವಧರ್ ಟ್ರೋಫಿಯಲ್ಲಿ ಫೈನಲ್ ಪಂದ್ಯದಲ್ಲಿ ಭಾರತ ಸಿ ಪರ ಆಡುತ್ತಿರುವ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಭಾರತ ಬಿ ತಂಡದ ನಾಯಕ ಪಾರ್ಥಿವ್ ಪಟೇಲ್ ಅವರನ್ನು ಔಟ್ ಮಾಡಿದರು. 

ಪೊರೆಲ್ ಎಸೆತದಲ್ಲಿ ಪಾರ್ಥಿವ್ ಪಟೇಲ್ ಡ್ರೈವ್ ಮಾಡಲು ಮುಂದಾದರೂ ಈ ವೇಳೆ ಚೆಂಡು ಬ್ಯಾಟ್ ಗೆ ತಗುಲಿ ಫಸ್ಟ್ ಸ್ಲೀಪ್ ಬಳಿ ಹೋಗುತ್ತಿದ್ದು ಈ ವೇಳೆ ಕೀಪರ್ ದಿನೇಶ್ ಡೈವ್ ಮಾಡಿ ಎಡಗೈನಲ್ಲಿ ಚೆಂಡನ್ನು ಹಿಡಿದು ಔಟ್ ಮಾಡಿದರು. 

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಬಿ 7 ವಿಕೆಟ್ ನಷ್ಟಕ್ಕೆ 283 ರನ್ ಪೇರಿಸಿ ಭಾರತ ಸಿ ತಂಡಕ್ಕೆ 284 ರನ್ ಗಳ ಗುರಿ ನೀಡಿತ್ತು. ಆದರೆ ಭಾರತ ಸಿ ತಂಡ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 232 ರನ್ ಪೇರಿಸಿ 51 ರನ್ ಗಳಿಂದ ಸೋಲಿಗೆ ಶರಣಾಯಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com