ಹಾರ್ದಿಕ್ ಪಾಂಡ್ಯರನ್ನು ಪ್ರೆಶರ್ ಕುಕ್ಕರ್ ಎಂದು ಕರೆದ ಕಾಲೆಳೆದ ಬುಮ್ರಾ, ವಿಡಿಯೋ ವೈರಲ್!

ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಬೆನ್ನು ನೋವಿನ ಸಮಸ್ಯೆಯಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡುತ್ತಿರುವ ಪಾಂಡ್ಯರನ್ನು ವೇಗಿ ಜಸ್ ಪ್ರೀತ್ ಬುಮ್ರಾ ಕಾಲೆಳೆದಿದ್ದಾರೆ.
ಬುಮ್ರಾ-ಹಾರ್ದಿಕ್ ಪಾಂಡ್ಯ
ಬುಮ್ರಾ-ಹಾರ್ದಿಕ್ ಪಾಂಡ್ಯ

ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಬೆನ್ನು ನೋವಿನ ಸಮಸ್ಯೆಯಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡುತ್ತಿರುವ ಪಾಂಡ್ಯರನ್ನು ವೇಗಿ ಜಸ್ ಪ್ರೀತ್ ಬುಮ್ರಾ ಕಾಲೆಳೆದಿದ್ದಾರೆ. 

ಶಸ್ತ್ರ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿರುವ ಪಾಂಡ್ಯ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಗೆ ಬುಮ್ರಾ ನೀನು ಪ್ರೆಶರ್ ಕುಕ್ಕರ್ ರೀತಿ ಶಬ್ದ ಮಾಡುತ್ತೀಯಾ ಎಂದು ಕಮೆಂಟ್ ಮಾಡಿದ್ದಾರೆ. 

ಇನ್ನು ಬುಮ್ರಾ ಸಹ ಬೆನ್ನು ನೋವಿನ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದು ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತಯಾರಿ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com