ಟೀಂ ಇಂಡಿಯಾ ತಂಡದಲ್ಲಿ ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದರಿಂದ ಅಭಿಮಾನಿಗಳಿಂದ ಭಾರೀ ವಿರೋಧ

ಯುವ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರನ್ನು ಭಾರತ ಟಿ-20 ತಂಡದಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕೈ ಬಿಟ್ಟಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಶಶಿ ತರೂರ್ ಸೇರಿದಂತೆ ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗಿದೆ.
ಸಂಜು ಸ್ಯಾಮ್ಸನ್-ಶಶಿ ತರೂರ್
ಸಂಜು ಸ್ಯಾಮ್ಸನ್-ಶಶಿ ತರೂರ್
Updated on

ನವದೆಹಲಿ: ಯುವ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರನ್ನು ಭಾರತ ಟಿ-20 ತಂಡದಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕೈ ಬಿಟ್ಟಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಶಶಿ ತರೂರ್ ಸೇರಿದಂತೆ ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗಿದೆ.

ಗುರುವಾರ ರಾತ್ರಿ ಮುಂದಿನ ತಿಂಗಳಲ್ಲಿ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಗಳಿಗೆ ಭಾರತ ತಂಡವನ್ನು ಎಸ್.ಎಸ್.ಕೆ ಪ್ರಸಾದ್ ನೇತೃತ್ವದಲ್ಲಿ ಆಯ್ಕೆ ಮಾಡಲಾಗಿದೆ. 15 ತಂಡದ ಸದಸ್ಯರಲ್ಲಿ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ನೀಡಿಲ್ಲ. ಆದರೆ, ಬಾಂಗ್ಲಾದೇಶ ವಿರುದ್ಧ ಕಳೆದ ಟಿ-20 ಸರಣಿಗೆ ಸಂಜು ಸ್ಯಾಮ್ಸನ್ ಆಯ್ಕೆ ಮಾಡಲಾಗಿತ್ತು. ಅವರಿಗೆ ಅಂತಿಮ 11 ರಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಇದೀಗ ವಿಂಡೀಸ್ ವಿರುದ್ಧದ ಚುಟುಕು ತಂಡದಲ್ಲಿ ಅವರನ್ನು ಪರಿಗಣಿಸಿಲ್ಲ.

ಸಂಜು ಸ್ಯಾಮ್ಸನ್ ಹಾಗೂ ದಿನೇಶ್ ಕಾರ್ತಿಕ್ ಅವರನ್ನು ತಂಡಕ್ಕೆ ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಬಿಸಿಸಿಐ ವಿರುದ್ಧ ಅಭಿಮಾನಿಗಳು ಅಸಮಾಧಾನ ಹೊರ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com