ಕ್ರಿಕೆಟ್

ಉಮೇಶ್, ಶಮಿ ಮಾರಕ ದಾಳಿ: ಹಿನ್ನಡೆಯ ಭೀತಿಯಲ್ಲಿ ದಕ್ಷಿಣ ಆಫ್ರಿಕಾ, 8 ವಿಕೆಟ್ ಪತನ

ಉಮೇಶ್, ಶಮಿ ಮಾರಕ ದಾಳಿ: ಹಿನ್ನಡೆಯ ಭೀತಿಯಲ್ಲಿ ದಕ್ಷಿಣ ಆಫ್ರಿಕಾ, 8 ವಿಕೆಟ್ ಪತನ
ಕೊಹ್ಲಿ
Published On :

ಪುಣೆ: ಹಿರಿಯ ವೇಗಿ ಉಮೇಶ್ ಯಾದವ್(27 ಕ್ಕೆ 3) ಹಾಗೂ ಮೊಹಮ್ಮದ್ ಶಮಿ (28 ಕ್ಕೆ 2) ಅವರ ಮಾರಕ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ ತಂಡ ಎರಡನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‍ನಲ್ಲಿ ಭಾರತದ ವಿರುದ್ಧ ಭಾರಿ ಅಂತರದ ಹಿನ್ನಡೆಯ ಭೀತಿಗೆ ಸಿಲುಕಿದೆ.

ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಮೂರು ವಿಕೆಟ್ ಕಳೆದುಕೊಂಡು 36 ರನ್‍ಗಳಿಂದ ಪ್ರಥಮ ಇನಿಂಗ್ಸ್ ಮುಂದುವರಿಸಿದ ದಕ್ಷಿಣ ಆಫ್ರಿಕಾ ತಂಡ ಮಧ್ಯಾಹ್ನದ ಭೋಜನ ವಿರಾಮದ ವೇಳೆಗೆ 42 ಓವರ್ ಗಳಿಗೆ ಆರು ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತ್ತು.

ನಂತರ ಬ್ಯಾಟಿಂಗ್ ಆರಂಭಿಸಿದ ಆಫ್ರಿಕಾ 169 ರನ್ ಗಳಿಗೆ ಮತ್ತೆರೆಡು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ ಇದರೊಂದಿಗೆ ಇನ್ನು, 431 ರನ್ ಹಿನ್ನಡೆಯಲ್ಲಿದ್ದು, ಕೈಯಲ್ಲಿ ಎರಡು ವಿಕೆಟ್ ಮಾತ್ರ ಇದೆ.

ಶನಿವಾರ ಬೆಳಗ್ಗೆ ಬ್ಯಾಟಿಂಗ್ ಮುಂದುವರಿಸಿದ ಆನ್ರಿಚ್ ನಾಡ್ಜ್ ಹಾಗೂ ಥ್ಯೂನಿಸ್ ಡಿ ಬ್ರೂಯಿನ್ ಅವರು ಹೆಚ್ಚು ಹೊತ್ತು ಕ್ರೀಸ್‍ನಲ್ಲಿ ಉಳಿಯಲಿಲ್ಲ.  ಆನ್ರಿಚ್ ನಾಡ್ಜ್ ಕೇವಲ ಮೂರು ರನ್ ಗಳಿಸಿ ಮೊಹಮ್ಮದ್ ಶಮಿ ಎಸೆತದಲ್ಲಿ ವೃದ್ದಿಮನ್ ಸಾಹ ಅವರಿಗೆ ಕ್ಯಾಚ್ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.