ಐಸಿಸಿ ರ್ಯಾಕಿಂಗ್: ಏಕದಿನ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ಕೊಹ್ಲಿ, ರೋಹಿತ್ ಅಗ್ರರು!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದಿದ್ದಾರೆ.
ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ
ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ
Updated on

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆದಿದ್ದಾರೆ. 

ವಿರಾಟ್ ಕೊಹ್ಲಿ(895) ಮತ್ತು ರೋಹಿತ್ ಶರ್ಮಾ (863) ಅಂಕಗಳನ್ನೊಂದಿಗೆ ಮೊದಲೇರೆಡು ಸ್ಥಾನಗಳನ್ನು ಪಡೆದಿದ್ದಾರೆ. ಇನ್ನು ಟೆಸ್ಟ್ ನಲ್ಲಿ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದು ರೋಹಿತ್ ಶರ್ಮಾ ಟಾಪ್ 10ರಲ್ಲಿ ಸ್ಥಾನಪಡೆದಿದ್ದಾರೆ. 

ಎಂದಿನಂತೆ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ 797 ಅಂಕಗಳೊಂದಿಗೆ ಏಕದಿನ ಕ್ರಿಕೆಟ್ ಬೌಲಿಂಗ್ ನಲ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. 

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾದ ಟೆಸ್ಟ್ ಕ್ರಿಕೆಟ್ ನಲ್ಲಿ 4659 ಅಂಕಗಳನೊಂದಿಗೆ ಅಗ್ರಸ್ಥಾನದಲ್ಲಿದೆ. ಏಕದಿನ ಕ್ರಿಕೆಟ್ ನಲ್ಲಿ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ಅಗ್ರಸ್ಥಾನದಲ್ಲಿದ್ದರೆ ಭಾರತ ಎರಡನೇ ಸ್ಥಾನದಲ್ಲಿದೆ. ಟಿ20ಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com