ಹುಬ್ಬಳ್ಳಿಯಲ್ಲಿ ಹಿಟ್‌ಮ್ಯಾನ್‌ ರೋಹಿತ್ ಶರ್ಮಾ!

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರತ ಕ್ರಿಕೆಟ್ ತಂಡದ ಉಪನಾಯಕ ರೋಹಿತ್ ಶರ್ಮ ದುರ್ಗಾ ಸ್ಪೋರ್ಟ್ಸ್ ಅಕಾಡೆಮಿಯನ್ನು ಉದ್ಘಾಟಿಸಿದರು.
ಹುಬ್ಬಳ್ಳಿಯಲ್ಲಿ ಹಿಟ್‌ಮ್ಯಾನ್‌ ರೋಹಿತ್ ಶರ್ಮಾ!
ಹುಬ್ಬಳ್ಳಿಯಲ್ಲಿ ಹಿಟ್‌ಮ್ಯಾನ್‌ ರೋಹಿತ್ ಶರ್ಮಾ!
Updated on

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರತ ಕ್ರಿಕೆಟ್ ತಂಡದ ಉಪನಾಯಕ ರೋಹಿತ್ ಶರ್ಮ ದುರ್ಗಾ ಸ್ಪೋರ್ಟ್ಸ್ ಅಕಾಡೆಮಿಯನ್ನು ಉದ್ಘಾಟಿಸಿದರು.

ನಗರದ ಕೋರ್ಟ್ ಹಿಂಭಾಗದಲ್ಲಿ ನೂತನವಾಗಿ ಆರಂಭಗೊಂಡಿರುವ ಕ್ರಿಕೆಟ್ ಅಕಾಡೆಮಿಯನ್ನು ಕ್ರಿಕ್ ಕಿಂಗ್ ಡಮ್ ಎಂಬ ಸಂಸ್ಥೆಯೊಂದಿಗೆ ಒಗ್ಗೂಡಿ ಉದ್ಘಾಟಿಸಿದರು.

ನೆಚ್ಚಿನ ನಾಯಕನನ್ನು ನೋಡಲು ಕ್ರಿಕೆಟ್ ಅಭಿಮಾನಿಗಳು ಮುಗಿಬಿದ್ದಿದ್ದರು. 

ನಂತರ  ರೋಹಿತ್ ಶರ್ಮಾ ಮಾತನಾಡಿ,  ನಾನು ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ್ದು,  ತುಂಬಾ ಸಂತಸವಾಗಿದೆ.ಭಾರತ ಕ್ರಿಕೆಟ್ ತಂಡಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದೆ. ಮತ್ತೆ ಮತ್ತೆ ಹುಬ್ಬಳ್ಳಿ ಗೆ ಬರುತ್ತೇನೆ. ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ ಎಂದರು.

ಕಾರ್ಯಕ್ರಮದಲ್ಲಿ ಕೂಡಲಸಂಗಮ ಪಂಚಮ ಸಾಲಿಪೀಠದ ಜಯಮೃತ್ಯಂಜಯ ಸ್ವಾಮೀಜಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com