ಮಹಿಳೆ ಕುರಿತು ಅಶ್ಲೀಲ ಹೇಳಿಕೆ: ಹಾರ್ದಿಕ್‌ ಪಾಂಡ್ಯ, ಕೆಎಲ್ ರಾಹುಲ್‌ಗೆ ಬಿಸಿಸಿಐ ಸಮನ್ಸ್

ಮಹಿಳೆ ಕುರಿತು ಅಶ್ಲೀಲ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ಟೀಂ ಇಂಡಿಯಾದ ಆಟಗಾರರಾದ ಕೆ.ಎಲ್‌ ರಾಹುಲ್‌ ಹಾಗೂ ಹಾರ್ದಿಕ್‌ ಪಾಂಡ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ...
ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್
ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್
ಮುಂಬೈ: ಮಹಿಳೆ ಕುರಿತು ಅಶ್ಲೀಲ ಹೇಳಿಕೆ ನೀಡಿದ್ದ ಪ್ರಕರಣ ಸಂಬಂಧ ಟೀಂ ಇಂಡಿಯಾದ ಆಟಗಾರರಾದ ಕೆ.ಎಲ್‌ ರಾಹುಲ್‌ ಹಾಗೂ ಹಾರ್ದಿಕ್‌ ಪಾಂಡ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತನಿಖಾಧಿಕಾರಿ ನಿವೃತ್ತ ನ್ಯಾಯಮೂರ್ತಿ ಡಿ.ಕೆ ಜೈನ್‌ ಅವರು ಸಮನ್ಸ್‌ ಜಾರಿ ಮಾಡಿದ್ದಾರೆ.
ಕರಣ್ ಜೋಹಾರ್ ನಡೆಸಿಕೊಡುವ 'ಕಾಫಿ ವಿಥ್ ಕರಣ್' ಕಾರ್ಯಕ್ರಮದಲ್ಲಿ ಇವರಿಬ್ಬರು ಮಹಿಳೆಯರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರಲ್ಲಿ ಕರುಣ್ ಕೇಳಿದ ಪ್ರಶ್ನೆಗೆ ಮನಬಂದಂತೆ ಉತ್ತರಿಸಿದ ಇವರಿಬ್ಬರು, ಸೆಕ್ಸ್​​, ಮಹಿಳೆಯರ ಬಗ್ಗೆ ವರ್ಣಬೇಧದ ಮಾತುಗಳನ್ನು ಆಡಿದ್ದರು.
ಈ ಕುರಿತು ಸಾಮಾಜಿಕ ತಾಣಗಳಲ್ಲಿ ಇವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದವು. ಹೀಗಾಗಿ ಪಾಂಡ್ಯ ಅವರು ಟ್ವಿಟ್ಟರ್​​ನಲ್ಲಿ ಕ್ಷಮೆ ಕೋರಿದ್ದರು. ಆದರೆ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಬಿಸಿಸಿಐ ಪಾಂಡ್ಯ ಹಾಗೂ ರಾಹುಲ್​ ಅವರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ.
ಹಾರ್ದಿಕ್‌ ಪಾಂಡ್ಯ ಹಾಗೂ ರಾಹುಲ್‌ ಅವರಿಗೆ ಕಳೆದ ವಾರವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಈ ಪ್ರಕರಣ ಕುರಿತು ಅವರ ವಾದ ಆಲಿಸುವುದು ಮುಖ್ಯವಾಗಿದೆ. ಹಾಗಾಗಿ, ಅವರು ಯಾವಾಗ ವಿಚಾರಣೆಗೆ ಹಾಜರಾಗುತ್ತಾರೆ ಎಂಬುದು ಅವರಿಗೆ ಬಿಡಲಾಗಿದೆ ಎಂದು ಜೈನ್‌ ತಿಳಿಸಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಕೆ.ಎಲ್‌ ರಾಹುಲ್‌ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡ ಹಾಗೂ ಹಾರ್ದಿಕ್‌ ಪಾಂಡ್ಯ, ಮುಂಬೈ ಇಂಡಿಯನ್ಸ್‌ ತಂಡದ ಪ್ರಮುಖ ಆಟಗಾರರಾಗಿದ್ದಾರೆ. ಆಸ್ಟ್ರೇಲಿಯಾ ಸರಣಿಯಿಂದ ತವರಿಗೆ ಬಂದಿದ್ದ ಇವರಿಬ್ಬರೂ ನ್ಯೂಜಿಲೆಂಡ್‌ ವಿರುದ್ಧದ ಸರಣಿಯಿಂದ ಹೊರಗುಳಿಸಿದ್ದರು. ನಿಷೇಧ ರದ್ದು ಮಾಡಿದ ಬಳಿಕ ಹಾರ್ದಿಕ್‌ ನ್ಯೂಜಿಲೆಂಡ್‌ ಏಕದಿನ ಸರಣಿಗೆ ತೆರಳಿಸಿದರೆ, ರಾಹುಲ್‌ ಭಾರತ"ಎ" ತಂಡಕ್ಕೆ ಸೇರ್ಪಡೆಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com