ಐಪಿಎಲ್ 2019; ಹೈದರಾಬಾದ್ ವಿರುದ್ಧ ಮುಂಬೈಗೆ 40 ರನ್ ಗಳ ಭರ್ಜರಿ ಜಯ

ತವರು ಕ್ರೀಡಾಂಗಣದಲ್ಲೇ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಭಾರಿ ಮುಖಭಂಗವಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 40 ರನ್ ಗಳ ಹೀನಾಯ ಸೋಲು ಕಂಡಿದೆ.

Published: 06th April 2019 12:00 PM  |   Last Updated: 06th April 2019 11:47 AM   |  A+A-


Mumbai indians won by 40 runs Against Sunrisers Hyderabad

ವಿಕೆಟ್ ಪಡೆದ ಸಂಭ್ರಮದಲ್ಲಿ ಮುಂಬೈ ತಂಡ

Posted By : SVN SVN
Source : Online Desk
ಹೈದರಾಬಾದ್: ತವರು ಕ್ರೀಡಾಂಗಣದಲ್ಲೇ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಭಾರಿ ಮುಖಭಂಗವಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 40 ರನ್ ಗಳ ಹೀನಾಯ ಸೋಲು ಕಂಡಿದೆ.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ನೀಡಿದ್ದ 137 ರನ್ ಗಳ ಸಾಮಾನ್ಯಗುರಿ ಬೆನ್ನು ಹತ್ತಿದ ಹೈದರಾಬಾದ್ ತಂಡ 17.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 96 ರನ್ ಗಳಿಸಿ 40 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

ಮುಂಬೈ ತಂಡದ ವೇಗಿ ಅಲ್ಜರಿ ಜೋಸೆಫ್ ಅವರ ಮಾರಕ ದಾಳಿಗೆ ಸಿಲುಕಿದ ಹೈದರಾಬಾದ್ ತಂಡ ತತ್ತರಿಸಿ ಹೋಯಿತು. ಕೇವಲ 65 ರನ್ ಗಳಿಗೆ ತನ್ನ ಐದು ವಿಕೆಟ್ ಕಳೆದುಕೊಂಡ ಹೈದರಾಬಾದ್, ಕೇವಲ 94ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಹೈದರಾಬಾದ್ ಪರ ದೀಪಕ್ ಹೂಡ ಗಳಿಸಿದ 20 ರನ್ ಗಳೇ ವೈಯುಕ್ತಿಕ ಗರಿಷ್ಠ ರನ್ ಗಳಿಕೆಯಾಗಿತ್ತು.

ಇನ್ನು ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಹೈದರಾಬಾದ್ ತಂಡದ ಬೌಲರ್ ಗಳ ಸಾಂಘಿಕ ಹೋರಾಟಕ್ಕೆ ಸಿಲುಕಿ ನಲುಗಿತು. ಪರಿಣಾಮ ಮುಂಬೈ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿತು. ಮುಂಬೈ ಪರ ಕೀರನ್ ಪೊಲಾರ್ಡ್ ಅಜೇಯ 46 ರನ್ ಗಳಿಸಿದರು.

ಇನ್ನು ಮುಂಬೈ ಪರ 6 ವಿಕೆಟ್ ಕಬಳಿಸಿದ ಅಲ್ಜರಿ ಜೋಸೆಫ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp