ಚೆನ್ನೈಗೆ ಮತ್ತೊಂದು ಕೊನೆಯ ಓವರ್ ರೋಚಕ ಗೆಲುವು

ಐಪಿಎಲ್ ನಲ್ಲಿ ಚೆನ್ನೈ ತಂಡ ಮತ್ತೊಂದು ಕೊನೆಯ ಓವರ್ ರೋಚಕ ಗೆಲುವು ಸಾಧಿಸಿದ್ದು ಈ ಮೂಲಕ ಅಂಕಪಟ್ಟಿಯಲ್ಲಿ 8 ಗೆಲುವು ಸಾಧಿಸುವ ಮೂಲಕ ಅಗ್ರಸ್ಥಾನಕ್ಕೇರಿದೆ.
ಎಂಎಸ್ ಧೋನಿ
ಎಂಎಸ್ ಧೋನಿ
ಚೆನ್ನೈ: ಐಪಿಎಲ್ ನಲ್ಲಿ ಚೆನ್ನೈ ತಂಡ ಮತ್ತೊಂದು ಕೊನೆಯ ಓವರ್ ರೋಚಕ ಗೆಲುವು ಸಾಧಿಸಿದ್ದು ಈ ಮೂಲಕ ಅಂಕಪಟ್ಟಿಯಲ್ಲಿ 8 ಗೆಲುವು ಸಾಧಿಸುವ ಮೂಲಕ ಅಗ್ರಸ್ಥಾನಕ್ಕೇರಿದೆ.
ಚೆನ್ನೈ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ ನಿಗದಿತ ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 175 ರನ್ ಪೇರಿಸಿತ್ತು. 176 ರನ್ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇನ್ನು 1 ಎಸೆತ ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು.
ಹೈದರಾಬಾದ್ ಪರ ಡೇವಿಡ್ ವಾರ್ನರ್ 57, ಮನೀಶ್ ಪಾಂಡೆ ಅಜೇಯ 83 ಮತ್ತು ವಿಜಯ್ ಶಂಕರ್ 26 ರನ್ ಗಳಿಸಿದ್ದಾರೆ. 
ಚೆನ್ನೈ ಪರ ಶೇನ್ ವಾಟ್ಸನ್ 96, ಸುರೇಶ್ ರೈನಾ 38, ಅಂಬಟ್ಟಿ ರಾಯುಡು 21 ರನ್ ಪೇರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com