ಪದಾರ್ಪಣೆ ಪಂದ್ಯದಲ್ಲೇ ದಾಖಲೆ ಬರೆದ ಸೈನಿ, ಈ ದಾಖಲೆ ಮಾಡಿದ ದಿಗ್ಗಜರ ಸಾಲಿಗೆ ಸೇರ್ಪಡೆ

ಹಿರಿಯರ ವಿಶ್ರಾಂತಿ ಹಿನ್ನಲೆಯಲ್ಲಿ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದ ಉದಯೋನ್ಮುಖ ಆಟಗಾರ ನವದೀಪ್ ಸೈನಿ ಪದಾರ್ಪಣೆ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಫ್ಲೋರಿಡಾ: ಹಿರಿಯರ ವಿಶ್ರಾಂತಿ ಹಿನ್ನಲೆಯಲ್ಲಿ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದ ಉದಯೋನ್ಮುಖ ಆಟಗಾರ ನವದೀಪ್ ಸೈನಿ ಪದಾರ್ಪಣೆ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಹೌದು.. ವೆಸ್ಟ್ ಇಂಡೀಸ್ ವಿರುದ್ಧದ  ಮೊದಲ ಟಿ20 ಪಂದ್ಯದಲ್ಲಿ ನವದೀಪ್ ಸೈನಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದರು. ತನ್ನ ಮೊದಲ ಪಂದ್ಯದಲ್ಲೇ 3 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ. ಡ್ರೈವರ್ ಮಗ ಸೈನಿ ಇದೀಗ ಅಂತಾರಾಷ್ಟ್ರೀ ಪಂದ್ಯದಲ್ಲಿ ಮಾರಕ ದಾಳಿ ಮೂಲಕ ಗಮನಸೆಳಿದಿದ್ದಾರೆ. ಲೌಡರ್‌ ಹಿಲ್‌ನಲ್ಲಿ ವಿಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 3 ವಿಕೆಟ್ ಪಡೆದ ಸೈನಿ ದಾಖಲೆ ನಿರ್ಮಿಸಿದ್ದಾರೆ.
ಸೈನಿ ತಾವೆಸೆದ ಮೊದಲ ಓವರ್ ನಲ್ಲೇ 2 ವಿಕೆಟ್ ಪಡೆದು ಈ ದಾಖಲೆ ಬರೆದ ಭಾರತದ 2ನೇ ಆಟಗಾರರಾಗಿದ್ದಾರೆ. ಈ ಹಿಂದೆ ಸ್ಪಿನ್ನರ್ ಪ್ರಗ್ಯಾನ್ ಓಜಾ ತಮ್ಮ ಮೊದಲ ಪದಾರ್ಪಣೆ ಪಂದ್ಯದಲ್ಲೇ ಮೊದಲ ಓವರ್ ನಲ್ಲಿ 2 ವಿಕೆಟ್ ಪಡೆದು ಈ ಸಾಧನೆ ಮಾಡಿದ ಮೊದಲ ಆಟಗಾರ ಎನಿಸಿಕೊಂಡಿದ್ದರು.
ಇನ್ನು ಪಂದ್ಯಶ್ರೇಷ್ಠ ಪ್ರಶಸ್ತಿಯಲ್ಲೂ ಸೈನಿ ದಾಖಲೆ ಬರೆದಿದ್ದು, ಪದಾರ್ಪಣೆ ಪಂದ್ಯದಲ್ಲೇ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಭಾರತದ 6ನೇ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದರು 2006ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಪದಾರ್ಪಣೆ ಪಂದ್ಯದಲ್ಲೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಮೊದಲ ಆಟಗಾರ ಎನಿಸಿಕೊಂಡಿದ್ದರು. ಆ ಬಳಿಕ 2009ರಲ್ಲಿ ಪ್ರಗ್ಯಾನ್ ಓಜಾ (ಬಾಂಗ್ಲಾದೇಶ ವಿರುದ್ಧ, ಟ್ರೆಂಟ್ ಬ್ರಿಡ್ಜ್ ನಲ್ಲಿ) 2011 ಎಸ್ ಬದ್ರಿನಾಥ್ (ವೆಸ್ಟ್ಇಂಡೀಸ್ ವಿರುದ್ಧ) ಪದಾರ್ಪಣೆ ಪಂದ್ಯದಲ್ಲೇ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com