ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ: ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಕೊಹ್ಲಿ ಪಡೆ

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತದ ಹೊರತಾಗಿಯೂ ಕೊಹ್ಲಿ ಪಡೆ ಉತ್ತಮ ಆರಂಭಕಂಡಿದೆ. 
ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ: ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಕೊಹ್ಲಿ ಪಡೆ

ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತದ ಹೊರತಾಗಿಯೂ ಕೊಹ್ಲಿ ಪಡೆ ಉತ್ತಮ ಆರಂಭಕಂಡಿದೆ. 

ಟ್ರಿನಿಡಾಡ್ ನ ಪೋರ್ಟ್ ಆಫ್ ಸ್ಪೇನ್ ನಲ್ಲಿರುವ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ನಾಯಕನ ನಿರ್ಧಾರದಂತೆ ಬೃಹತ್ ಮೊತ್ತದ ಕನಸಿನೊಂದಿಗೆ ಕ್ರೀಸ್ ಗೆ ಬಂದ ಭಾರತ ತಂಡಕ್ಕೆ ವಿಂಡೀಸ್ ಬೌಲರ್ ಕಾಟ್ರೆಲ್ ಆರಂಭಿಕ ಆಘಾತ ನೀಡಿದರು. ಮೊದಲ ಓವರ್ ನ ಮೂರನೇ ಎಸೆತದಲ್ಲೇ ಕಾಟ್ರೆಲ್ ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು ಎಲ್ ಬಿ ಬಲೆಗೆ ಕೆಡವಿದರು.  

ಆ ಬಳಿಕ ಕ್ರೀಸ್ ಗೆ ಬಂದ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಜೋಡಿ ರಕ್ಷಣಾತ್ಮಕ ಆಟದ ಮೊರೆ ಹೋಗಿ ನಿಧಾನವಾಗಿ ರನ್ ಕದಿಯಲು ಆರಂಭಿಸಿದರು. ನಾಯಕ ವಿರಾಟ್ ಕೊಹ್ಲಿ ಆಟಕ್ಕೆ ಹೊಂದಿಕೊಂಡು ತಮ್ಮ ರನ್ ವೇಗ ಹೆಚ್ಚಿಸಿಕೊಂಡರೆ ಹಿಟ್ ಮ್ಯಾನ್ ರೋಹಿತ್ ರಕ್ಷಣಾತ್ಮಕ ಆಟದಿಂದ ಕ್ರೀಸ್ ಗೆ ಅಂಟಿಕೊಂಡು ಆಡುತ್ತಿದ್ದಾರೆ. 

ಇತ್ತೀಚಿನ ವರದಿಗಳು ಬಂದಾಗ 14.2 ಓವರ್ ನಲ್ಲಿ ಭಾರತ ತಂಡ 4.95 ರನ್ ಸರಾಸರಿಯಲ್ಲಿ 1 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿದ್ದು, ರೋಹಿತ್ ಶರ್ಮಾ 31 ಎಸೆತಗಳಲ್ಲಿ 2 ಬೌಂಡರಿ ಸಮೇತ 18 ರನ್ ಗಳಿಸಿದ್ದಾರೆ. ಇನ್ನು ನಾಯಕ ವಿರಾಟ್ ಕೊಹ್ಲಿ 57 ಎಸೆತಗಳಲ್ಲಿ 7 ಬೌಂಡರಿಗಳ ನೆರವಿನಿಂದ 50 ರನ್ ಗಳಿಸಿ ಅರ್ಧಶತಕ ಸಿಡಿಸಿದ್ದಾರೆ. ಇನ್ನು ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಗೆ ಇದು 55ನೇ ಅರ್ಧಶತಕವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com