ಎಂಎಸ್ ಧೋನಿ ದಾಖಲೆ ಧೂಳಿಪಟ ಮಾಡುವ ಸನಿಹದಲ್ಲಿ ವಿರಾಟ್ ಕೊಹ್ಲಿ!
ಕ್ರಿಕೆಟ್ ಇತಿಹಾಸದಲ್ಲಿನ ಹಲವು ದಾಖಲೆಗಳನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುರಿದು ನೂತನ ದಾಖಲೆಗಳನ್ನು ನಿರ್ಮಿಸುತ್ತಿದ್ದು ಇದೀಗ ಮಾಜಿ ನಾಯಕ ಎಂಎಸ್ ಧೋನಿ ದಾಖಲೆ ಸರಿಗಟ್ಟುವ ಸನಿಹದಲ್ಲಿದ್ದಾರೆ.
Published: 21st August 2019 01:27 PM | Last Updated: 21st August 2019 01:36 PM | A+A A-

ಎಂಎಸ್ ಧೋನಿ-ವಿರಾಟ್ ಕೊಹ್ಲಿ
ನವದೆಹಲಿ: ಕ್ರಿಕೆಟ್ ಇತಿಹಾಸದಲ್ಲಿನ ಹಲವು ದಾಖಲೆಗಳನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುರಿದು ನೂತನ ದಾಖಲೆಗಳನ್ನು ನಿರ್ಮಿಸುತ್ತಿದ್ದು ಇದೀಗ ಮಾಜಿ ನಾಯಕ ಎಂಎಸ್ ಧೋನಿ ದಾಖಲೆ ಸರಿಗಟ್ಟುವ ಸನಿಹದಲ್ಲಿದ್ದಾರೆ.
ಟೆಸ್ಟ್ ತಂಡದ ನಾಯಕನಾಗಿ ಎಂಎಸ್ ಧೋನಿ 60 ಪಂದ್ಯಗಳಲ್ಲಿ 27 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರು. ಈ ದಾಖಲೆಯನ್ನು ಕೊಹ್ಲಿ ಮುರಿಯಲಿದ್ದಾರೆ. ಸದ್ಯ 30 ವರ್ಷದ ವಿರಾಟ್ ಕೊಹ್ಲಿ 46 ಪಂದ್ಯಗಳಲ್ಲೇ 26 ಪಂದ್ಯಗಳಲ್ಲಿ ಗೆಲುವು ಸಾಧಿಸಿ ದಾಖಲೆಯ ಸನಿಹದಲ್ಲಿದ್ದಾರೆ.
ನಾಳೆಯಿಂದ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದ್ದು ವಿರಾಟ್ ಕೊಹ್ಲಿ ಇದರ ನಾಯಕತ್ವ ವಹಿಸಲಿದ್ದಾರೆ.