2ನೇ ಟೆಸ್ಟ್: ಟಾಸ್ ಗೆದ್ದ ವಿಂಡೀಸ್ ಬೌಲಿಂಗ್ ಆಯ್ಕೆ, ಭಾರತಕ್ಕೆ ಆರಂಭಿಕ ಆಘಾತ

ಭಾರತದ ವಿರುದ್ಧ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಟೀಂ ಇಂಡಿಯಾಗೆ ಆರಂಭಿಕ ಆಘಾತ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಲೋಕೇಶ್ ರಾಹುಲ್, ಚೇತೇಶ್ವರ ಪೂಜಾರಾ ಔಟ್, ಅರ್ಧಶತಕದ ಹೊಸ್ತಿಲಲ್ಲಿ ಮಯಾಂಕ್ ಅಗರ್ವಾಲ್

ಜಮೈಕಾ: ಭಾರತದ ವಿರುದ್ಧ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಟೀಂ ಇಂಡಿಯಾಗೆ ಆರಂಭಿಕ ಆಘಾತ ನೀಡಿದೆ.

ಜಮೈಕಾದ ಸಬೀನಾ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಬ್ಯಾಟಿಂಗ್ ನಡೆಸುತ್ತಿದ್ದು, ಆರಂಭಿಕ ಆಘಾತ ಎದುರಿಸಿದೆ. ಭಾರತ ಆರಂಭಿಕ ಆಟಗಾರ ಕೆಎಲ್ ರಾಹುಲ್ ಕೇವಲ 13 ರನ್ ಗಳಿಸಿ ಹೋಲ್ಡರ್ ಬೌಲಿಂಗ್ ನಲ್ಲಿ ಔಟ್ ಆಗಿದ್ದು, 6 ರನ್ ಗಳಿಸಿದ್ದ ಪೂಜಾರಾ ಕೂಡ ಬೇಗನೆ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಇನ್ನು ಆರಂಭಿಕ ಆಘಾತ ಅನುಭವಿಸಿರುವ ಭಾರತಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ನೆರವಾಗಿದ್ದು, ಮಯಾಂಕ್ 41 ರನ್ ಗಳಿಸಿ ಅರ್ಧಶತಕದ ಹೊಸ್ತಿಲಲ್ಲಿದ್ದಾರೆ. ಇನ್ನು ಮಯಾಂಕ್ ಗೆ ನಾಯಕ ವಿರಾಟ್ ಕೊಹ್ಲಿ ಸಾಥ್ ನೀಡುತ್ತಿದ್ದು, ಅವರು 5 ರನ್ ಗಳಿಸಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಭೋಜನ ವಿರಾಮದ ಹೊತ್ತಿಗೆ ಭಾರತ ತಂಡ 2 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿದೆ

ವಿಂಡೀಸ್ ಪರ ಹೋಲ್ಡರ್ ಮತ್ತು ಕಾರ್ನ್ ವಾಲ್ ತಲಾ 1 ವಿಕೆಟ್ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com