3ನೇ ಟಿ20 ಪಂದ್ಯ: ವಿಂಡೀಸ್ ವಿರುದ್ಧ ಆರ್ಭಟಿಸಿ ದಾಖಲೆ ಬರೆದ ಕಿಂಗ್ ಕೊಹ್ಲಿ

ವೆಸ್ಟ್ ಇಂಡೀಸ್ ವಿರುದ್ಧ ಆರ್ಭಟಿಸಿ ಭಾರತದ ಬೃಹತ್ ಮೊತಕ್ಕೆ ಕಾರಣವಾಗಿದ್ದ ವಿರಾಟ್ ಕೊಹ್ಲಿ ತಮ್ಮ ಭರ್ಜರಿ ಇನ್ನಿಂಗ್ಸ್ ಮೂಲಕ ದಾಖಲೆ ನಿರ್ಮಾಣ ಮಾಡಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಆರ್ಭಟಿಸಿ ಭಾರತದ ಬೃಹತ್ ಮೊತಕ್ಕೆ ಕಾರಣವಾಗಿದ್ದ ವಿರಾಟ್ ಕೊಹ್ಲಿ ತಮ್ಮ ಭರ್ಜರಿ ಇನ್ನಿಂಗ್ಸ್ ಮೂಲಕ ದಾಖಲೆ ನಿರ್ಮಾಣ ಮಾಡಿದ್ದಾರೆ.

ಹೌದು.. ಕೆಎಲ್ ರಾಹುಲ್ ಜೊತೆಗೂಡಿ ವಿಂಡೀಸ್ ಬೌಲಿಂಗ್ ಯೋಜನೆಯನ್ನು ಚಿಂದಿ ಉಡಾಯಿಸಿದ ವಿರಾಟ್ ಕೊಹ್ಲಿ ಕೇವಲ 29 ಎಸೆತಗಳಲ್ಲಿ 70 ರನ್ ಸಿಡಿಸಿದರು. ಅವರ ಈ ಅರ್ಧಶತಕದಲ್ಲಿ 7 ಸಿಕ್ಸರ್ ಮತ್ತು 4 ಬೌಂಡರಿ ಸೇರಿತ್ತು. ಇದೇ ಭರ್ಜರಿ ಇನ್ನಿಂಗ್ಸ್ ಮೂಲಕ ವಿರಾಟ್ ಕೊಹ್ಲಿ ಮತ್ತೊಮ್ಮೆ ದಾಖಲೆಗಳನ್ನು ನಿರ್ಮಾಣ ಮಾಡಿದ್ದು, ಟಿ20 ಪಂದ್ಯದಲ್ಲಿ ಕಡಿಮೆ ಎಸೆತದಲ್ಲಿ ಅರ್ಧಶತಕ ಸಿಡಿಸಿದ ಭಾರತದ ಮೊದಲ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. 

ಅಲ್ಲದೆ ಭಾರತದ ಪರ 5ನೇ ವೇಗದ ಅರ್ಧಶತಕ ಸಿಡಿಸಿದ ಆಟಗಾರ ಮತ್ತು ಮೊದಲ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಇದಕ್ಕೂ ಮೊದಲು 2007ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಡರ್ಬನ್ ನಲ್ಲಿ ಯುವಿ ಸಿಡಿಸಿದ 12 ಎಸೆತಗಳಲ್ಲಿ ಅರ್ಧಶತಕ ಟಿ20 ಪಂದ್ಯದಲ್ಲಿ ಭಾರತದ ಆಟಗಾರ ಸಿಡಿಸಿದ ವೇಗದ ಅರ್ಧಶತಕವಾಗಿದೆ. ಆ ಬಳಿಕ 2009ರಲ್ಲಿ ನಾಗ್ಪುರದಲ್ಲಿ ಗೌತಮ್ ಗಂಭೀರ್ 19 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com