2ನೇ ಏಕದಿನ ಪಂದ್ಯ: ಭಾರತದ ವಿರುದ್ಧ ಟಾಸ್ ಗೆದ್ದ ವಿಂಡೀಸ್ ಬೌಲಿಂಗ್ ಆಯ್ಕೆ!

ತೀವ್ರ ಕುತೂಹಲ ಕೆರಳಿಸಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲಾರ್ಡ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಟಾಸ್ ಗೆದ್ದ ವಿಂಡೀಸ್
ಟಾಸ್ ಗೆದ್ದ ವಿಂಡೀಸ್

ವಿಶಾಖಪಟ್ಟಣಂ: ತೀವ್ರ ಕುತೂಹಲ ಕೆರಳಿಸಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲಾರ್ಡ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ವಿಶಾಖಪಟ್ಟಣದ ವೈಎಸ್ ರಾಜಶೇಖರ  ರೆಡ್ಡಿ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಈಗಾಗಲೇ ಮೊದಲ ಪಂದ್ಯವನ್ನು ಸೋತಿರುವ ಭಾರತ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಿಕೊಳ್ಳುವುದು ಭಾರತದ ನಡೆಯಾದರೆ, ಈ ಪಂದ್ಯವನ್ನೂ ಗೆದ್ದು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳಲು ವಿಂಡೀಸ್ ತವಕಿಸುತ್ತಿದೆ. 

ಇನ್ನು ಇಂದಿನ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಶಿವಂ ದುಬೆ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ. ಅಂತೆಯೇ ವಿಂಡೀಸ್ ತಂಡದಲ್ಲೂ ಎರಡು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಸುನಿಲ್ ಅಂಬ್ರಿಸ್ ಬದಲಿಗೆ ಎವಿನ್ ಲೂಯಿಸ್ ಮತ್ತು ಹೇಡನ್ ವಾಲ್ಶ್ ಜೂನಿಯರ್ ಬದಲಿಗೆ ಖಾರಿ ಪಿಯರೆ ಸ್ಥಾನ ಪಡೆದಿದ್ದಾರೆ.

ತಂಡಗಳು ಇಂತಿವೆ.
ಭಾರತ ತಂಡ

ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಕೇದಾರ್ ಜಾಧವ್, ರವೀಂದ್ರ ಜಡೇಜಾ, ದೀಪಕ್ ಚಹರ್, ಮೊಹಮದ್ ಶಮಿ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್

ವೆಸ್ಟ್ ಇಂಡೀಸ್ ತಂಡ
ಶಾಯ್ ಹೋಪ್, ಇವೆನ್ ಲೂಯಿಸ್, ಶಿಮ್ರಾನ್ ಹೆಟ್ಮಿಯರ್, ನಿಕೋಲಸ್ ಪೂರನ್, ರೋಸ್ಟನ್ ಚೇಸ್, ಕೀರನ್ ಪೊಲಾರ್ಡ್ (ನಾಯಕ), ಜೇಸನ್ ಹೋಲ್ಡರ್, ಕೀಮೋ ಪಾಲ್, ಅಲ್ಜಾರಿ ಜೋಸೆಫ್, ಶೆಲ್ಡಾನ್ ಕಾಟ್ರೆಲ್, ಖಾರೆ ಪಿಯರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com