ವಿಶ್ವ ದಾಖಲೆ ನಿರ್ಮಾಣಕ್ಕೆ 'ಹಿಟ್ ಮ್ಯಾನ್' ರೋಹಿತ್ ಶರ್ಮಾಗೆ ಬೇಕು ಕೇವಲ 9ರನ್!

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ರೋಹಿತ್ ಶರ್ಮಾ ವಿಶ್ವ ದಾಖಲೆಯೊಂದರ ಸನಿಹದಲ್ಲಿದ್ದಾರೆ.

Published: 22nd December 2019 11:31 AM  |   Last Updated: 22nd December 2019 11:31 AM   |  A+A-


Rohit Sharma inches away from breaking a world record

ಸಂಗ್ರಹ ಚಿತ್ರ

Posted By : Srinivasamurthy VN
Source : Online Desk

ಕಟಕ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ರೋಹಿತ್ ಶರ್ಮಾ ವಿಶ್ವ ದಾಖಲೆಯೊಂದರ ಸನಿಹದಲ್ಲಿದ್ದಾರೆ.

ಹೌದು.. ಇಂದು ಕಟಕ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ವಿಶ್ವ ದಾಖಲೆ ನಿರ್ಮಾಣ ಮಾಡುವ ಸನ್ನಾಹದಲ್ಲಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ರೋಹಿತ್ ಶರ್ಮಾ ಇಂದು ನಡೆಯಲಿರುವ ಅಂತಿಮ ಏಕದಿನ ಪಂದ್ಯದಲ್ಲಿ ಕೇವಲ 9 ರನ್ ಗಳಿಸಿದರೆ 22 ವರ್ಷಗಳ ಹಳೆಯ ವಿಶ್ವ ದಾಖಲೆ ನಿರ್ಮಾಣ ಮಾಡಲಿದ್ದಾರೆ.

ಇಷ್ಟಕ್ಕೂ ಯಾವುದು ಆ ವಿಶ್ವ ದಾಖಲೆ?
ಹಾಲಿ ವರ್ಷದಲ್ಲಿ ರೋಹಿತ್ ಶರ್ಮಾ ಆರಂಭಿಕರಾಗಿ ಈ ವರೆಗೂ 2,379 ರನ್ ಭಾರಿಸಿದ್ದು, ಇನ್ನು ಕೇವಲ 9 ರನ್ ಸಿಡಿಸಿದರೆ ಶ್ರೀಲಂಕಾದ ಕ್ರಿಕೆಟ್ ದಂತಕಥೆ ಸನತ್ ಜಯಸೂರ್ಯ ಅವರ ದಾಖಲೆ ಮುರಿಯಲಿದ್ದಾರೆ. ಶ್ರೀಲಂಕಾದ ಸನತ್ ಜಯಸೂರ್ಯ ಹೆಸರಿನಲ್ಲಿರುವ 22 ವರ್ಷ ಹಳೆಯ ದಾಖಲೆಯೊಂದನ್ನು ಒಲಿಸಿಕೊಳ್ಳಲು ಭಾರತದ ಆರಂಭಿಕ ರೋಹಿತ್ ಶರ್ಮಗೆ ಕೇವಲ 9 ರನ್ ಅಗತ್ಯವಿದೆ. 22 ವರ್ಷಗಳ ಹಿಂದೆ ಅಂದರೆ 1997ರಲ್ಲಿ ಜಯಸೂರ್ಯ ಆರಂಭಿಕ ಬ್ಯಾಟ್ಸ್​ಮನ್ ಆಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ (ಏಕದಿನ ಮತ್ತು ಟೆಸ್ಟ್) ಒಟ್ಟು 2,387ರನ್ ಸಿಡಿಸಿದ್ದರು. ಟೆಸ್ಟ್​ನಲ್ಲೂ ಆರಂಭಿಕರಾಗಿರುವ ರೋಹಿತ್ ಶರ್ಮ 2019ರಲ್ಲಿ ಇದುವರೆಗೆ 2,379 ರನ್ (ಏಕದಿನ, ಟೆಸ್ಟ್, ಟಿ20) ಬಾರಿಸಿದ್ದಾರೆ.
 

Stay up to date on all the latest ಕ್ರಿಕೆಟ್ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp