3ನೇ ಏಕದಿನ: ವಿಂಡೀಸ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

Published: 22nd December 2019 01:38 PM  |   Last Updated: 22nd December 2019 01:39 PM   |  A+A-


India have won the toss and have opted to field

ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ

Posted By : Srinivasamurthy VN
Source : Online Desk

ಕಟಕ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಕಟಕ್ ನ ಬಾರಾಬತಿ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತದ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಗಾಯಾಳು ದೀಪಕ್ ಚಹರ್ ಬದಲಿಗೆ ನವದೀಪ್ ಸೈನಿ ತಂಡ ಸೇರಿಕೊಂಡಿದ್ದಾರೆ. ಸೈನಿಗೆ ಇದು ಪದಾರ್ಪಣೆ ಪಂದ್ಯವಾಗಿದೆ.

ಈಗಾಗಲೇ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು 1-1ರಲ್ಲಿ ಸಮಬಲ ಸಾಧಿಸಿದ್ದು, ಇಂದು ನಡೆಯುವ ಅಂತಿಮ ಪಂದ್ಯದಲ್ಲಿ ಗೆಲ್ಲುವ ತಂಡ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ. ವಿರಾಟ್ ಕೊಹ್ಲಿ ಬಳಗಕ್ಕೆ ಇದು 2019ರ ಕೊನೇ ಪಂದ್ಯವಾಗಿದ್ದು, ಗೆಲುವಿನೊಂದಿಗೆ ವರ್ಷವನ್ನು ಹರ್ಷದಿಂದ ಮುಗಿಸುವ ಇರಾದೆಯಲ್ಲಿದೆ. ಚೆನ್ನೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯರಿಗೆ ಆಘಾತ ನೀಡಿ ಬೀಗಿದ್ದ ವಿಂಡೀಸ್ ತಂಡ, ವಿಶಾಖಪಟ್ಟಣದಲ್ಲಿ ಭಾರತದ ಬ್ಯಾಟಿಂಗ್ ಅಬ್ಬರದೆದುರು ಮಂಕಾಗಿತ್ತು. ಇದೀಗ ಅಂತಿಮ ಪಂದ್ಯದಲ್ಲಿ ಮತ್ತೆ ಭಾರತಕ್ಕೆ ಆಘಾತ ನೀಡುವ ಮೂಲಕ ಸಂಭ್ರಮದಿಂದ ತವರಿಗೆ ಮರಳುವ ಗುರಿ ಹೊಂದಿದೆ.  ಇದೇ ಕಾರಣಕ್ಕೆ ಇಂದಿನ ಕಟಕ್ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.

ವೆಸ್ಟ್ ಇಂಡೀಸ್: ಎವಿನ್ ಲೂಯಿಸ್, ಶಾಯ್ ಹೋಪ್, ಶಿಮ್ರಾನ್ ಹೆಟ್ಮಿಯರ್, ರೋಸ್ಟನ್ ಚೇಸ್, ನಿಕೋಲಸ್ ಪೂರನ್, ಕೀರನ್ ಪೊಲಾರ್ಡ್ (ನಾಯಕ), ಜೇಸನ್ ಹೋಲ್ಡರ್, ಕೀಮೋ ಪಾಲ್, ಅಲ್ಜಾರಿ ಜೋಸೆಫ್, ಖಾರಿ ಪಿಯರೆ, ಶೆಲ್ಡನ್ ಕಾಟ್ರೆಲ್

ಭಾರತ: ರೋಹಿತ್ ಶರ್ಮಾ, ಲೋಕೇಶ್ ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೇದಾರ್ ಜಾಧವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಶಾರ್ದುಲ್ ಠಾಕೂರ್, ಕುಲದೀಪ್ ಯಾದವ್, ನವದೀಪ್ ಸೈನಿ

Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp