ಮತ್ತೊಂದು ವಿಶ್ವ ದಾಖಲೆ ಬರೆದ 'ಹಿಟ್ ಮ್ಯಾನ್' ರೋಹಿತ್ ಶರ್ಮಾ, ಜಯಸೂರ್ಯ ದಾಖಲೆ ಧೂಳಿಪಟ!

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ರೋಹಿತ್ ಶರ್ಮಾ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ಕಟಕ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ್ದ ರೋಹಿತ್ ಶರ್ಮಾ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.

ಹೌದು..ಕಟಕ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ 9 ರನ್ ಬಾರಿಸಿ ವಿಶ್ವ ದಾಖಲೆ ನಿರ್ಮಾಣ ಮಾಡಿದ್ದಾರೆ.

ಏಕದಿನ ಕ್ರಿಕೆಟ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ರೋಹಿತ್ ಶರ್ಮಾ ಅಂತಿಮ ಏಕದಿನ ಪಂದ್ಯದಲ್ಲಿ ಕೇವಲ 9 ರನ್ ಗಳಿಸಿ 22 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದಿದ್ದಾರೆ.

ಇಷ್ಟಕ್ಕೂ ಯಾವುದು ಆ ವಿಶ್ವ ದಾಖಲೆ?
ಹಾಲಿ ವರ್ಷದಲ್ಲಿ ರೋಹಿತ್ ಶರ್ಮಾ ಆರಂಭಿಕರಾಗಿ ಈವರೆಗೂ 2,379 ರನ್ ಭಾರಿಸಿದ್ದು, ಇನ್ನು ಕೇವಲ 9 ರನ್ ಸಿಡಿಸಿದರೆ ಶ್ರೀಲಂಕಾದ ಕ್ರಿಕೆಟ್ ದಂತಕಥೆ ಸನತ್ ಜಯಸೂರ್ಯ ಅವರ ದಾಖಲೆ ಮುರಿದಿದ್ದಾರೆ. ಶ್ರೀಲಂಕಾದ ಸನತ್ ಜಯಸೂರ್ಯ ಹೆಸರಿನಲ್ಲಿರುವ 22 ವರ್ಷ ಹಳೆಯ ದಾಖಲೆಯೊಂದನ್ನು ಒಲಿಸಿಕೊಳ್ಳಲು ಭಾರತದ ಆರಂಭಿಕ ರೋಹಿತ್ ಶರ್ಮಗೆ ಕೇವಲ 9 ರನ್ ಅಗತ್ಯವಿತ್ತು.

22 ವರ್ಷಗಳ ಹಿಂದೆ ಅಂದರೆ 1997ರಲ್ಲಿ ಜಯಸೂರ್ಯ ಆರಂಭಿಕ ಬ್ಯಾಟ್ಸ್​ಮನ್ ಆಗಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ (ಏಕದಿನ ಮತ್ತು ಟೆಸ್ಟ್) ಒಟ್ಟು 2,387ರನ್ ಸಿಡಿಸಿದ್ದರು. ಟೆಸ್ಟ್​ನಲ್ಲೂ ಆರಂಭಿಕರಾಗಿರುವ ರೋಹಿತ್ ಶರ್ಮ 2019ರಲ್ಲಿ ಇದುವರೆಗೆ 2,379 ರನ್ (ಏಕದಿನ, ಟೆಸ್ಟ್, ಟಿ20) ಬಾರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com